Home » Sullia election: ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ : ಪಕ್ಷದ ನಿರ್ಧಾರಕ್ಕೆ ಬದ್ದ -ಎಸ್.ಅಂಗಾರ

Sullia election: ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ : ಪಕ್ಷದ ನಿರ್ಧಾರಕ್ಕೆ ಬದ್ದ -ಎಸ್.ಅಂಗಾರ

by Praveen Chennavara
1 comment
Sullia election

ಸುಬ್ರಹ್ಮಣ್ಯ: ಸುಳ್ಯಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಕಾಂಕ್ಷಿಗಳು ಇದ್ದಾರೆ. ಸ್ಪರ್ಧೆಗೆ ಆಕಾಂಕ್ಷೆ ಯಾರೂ ವ್ಯಕ್ತಪಡಿಸಬಹುದು (Sullia BJP Candidate selection). ಆದರೆ ನಿರ್ಧಾರವನ್ನು ಪಾರ್ಟಿ ಮಾಡಲಿದೆ. ಅದರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.

ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರ ಜತೆ ಮಾತನಾಡಿದರು.

ರಾಜ್ಯದಲ್ಲಿ ಈ ಬಾರಿ 135 ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ.ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗದಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಎಸ್.ಅಂಗಾರ ಹೇಳಿದರು.

You may also like

Leave a Comment