Home » ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ ಸಚಿವರಿಗೆ ಮನವಿ

ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ ಸಚಿವರಿಗೆ ಮನವಿ

by Praveen Chennavara
0 comments

ಪುತ್ತೂರು :ದ‌.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೋಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲೆಯ ಶಾಸಕರು ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಇಂತಹ ಘಟನೆಗಳನ್ನು ಸೂಕ್ತ ರೀತಿಯಲ್ಲಿ ಹತ್ತಿಕ್ಕುವ ಕಾರ್ಯ ಇಲಾಖೆಯಿಂದ ಆಗಬೇಕಿದೆ. ಈ ಬಗ್ಗೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಮಾನ್ಯ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ಅವರಿಗೆ ಒತ್ತಾಯಿಸಿದರು‌.

ಉಸ್ತುವಾರಿ ಸಚಿವರಾದ ಎಸ್.ಅಂಗಾರ ಹಾಗೂ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

You may also like

Leave a Comment