Home » ವಿಟ್ಲ: ಎರಡು ಕಾರುಗಳ ನಡುವೆ ಭೀಕರ ಅಪಘಾತ- ಓರ್ವ ಮೃತ್ಯು, ನಾಲ್ವರಿಗೆ ಗಾಯ!

ವಿಟ್ಲ: ಎರಡು ಕಾರುಗಳ ನಡುವೆ ಭೀಕರ ಅಪಘಾತ- ಓರ್ವ ಮೃತ್ಯು, ನಾಲ್ವರಿಗೆ ಗಾಯ!

0 comments

ವಿಟ್ಲ : ಎರಡು ಕಾರುಗಳು ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆಯೊಂದು ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಜೆ.ಪಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಅಚಾರಿ (65) ಮೃತರಾದ ವ್ಯಕ್ತಿ. ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರ ಪುತ್ರಿಯ ಮದುವೆ ಆಮಂತ್ರಣ ನೀಡಲು ಊರಿಗೆ ಬರುತ್ತಿದ್ದರು ಎನ್ನಲಾಗಿದೆ.

ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ. ಈ ಸಮಯದಲ್ಲಿ ಬುಡೋಳಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ‌.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment