Home » ವಿಟ್ಲ : ಪಟ್ಟಣ ಪಂಚಾಯತ್ ಸಿಬಂದಿಗೆ ಮಾಜಿ ಸದಸ್ಯನಿಂದ ಕಿರುಕುಳ ಆರೋಪ | ಮನನೊಂದ ಸಿಬಂದಿ ಆತ್ಮಹತ್ಯೆ ಯತ್ನ

ವಿಟ್ಲ : ಪಟ್ಟಣ ಪಂಚಾಯತ್ ಸಿಬಂದಿಗೆ ಮಾಜಿ ಸದಸ್ಯನಿಂದ ಕಿರುಕುಳ ಆರೋಪ | ಮನನೊಂದ ಸಿಬಂದಿ ಆತ್ಮಹತ್ಯೆ ಯತ್ನ

by Praveen Chennavara
0 comments

ಪುತ್ತೂರು : ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ ನೋಟು ಬರೆದಿಟ್ಟು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಆತನನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು.

ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ಅವರ ಮೇಲೆ ಲಂಚ ಕೇಳಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ವರದಿ ಪ್ರಕಟಗೊಂಡಿತ್ತು.

ರಾಜೇಶ್ ಕೆಲವರಿಗೆ ವಾಟ್ಸಾಪ್ ನಲ್ಲಿ ವಾಟ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಮಾನಸಿಕವಾಗಿ ಮನನೊಂದಿರುತ್ತೇನೆ ಎಂದು ಬರೆದುಕೊಂಡಿದ್ದಾರೆ

You may also like

Leave a Comment