Home » ಮಂಗಳೂರು | ಖ್ಯಾತ ಯಕ್ಷಗಾನ ಕಲಾವಿದ ಆತ್ಮಹತ್ಯೆ

ಮಂಗಳೂರು | ಖ್ಯಾತ ಯಕ್ಷಗಾನ ಕಲಾವಿದ ಆತ್ಮಹತ್ಯೆ

by Praveen Chennavara
0 comments

ಕಟೀಲು: ಯಕ್ಷಗಾನ ಕಲಾವಿದರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟೀಲು ಸಮೀಪ ಉಲ್ಲಂಜೆ ಎಂಬಲ್ಲಿ ಇಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಲಾವಿದರನ್ನು ಕೊಡೆತ್ತೂರು ನಿವಾಸಿ ಶಂಭುಕುಮಾರ್ (48)ಎಂದು ಗುರುತಿಸಲಾಗಿದೆ.

ಪುತ್ತೂರು,ಬಪ್ಪನಾಡು ಹಾಗೂ ಕಟೀಲು ಮೇಳಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಹಳೆಯಂಗಡಿ ಸಮೀಪದ ಹೊಯಿಗೆ ಗುಡ್ಡೆ ಉಮಾಮಹೇಶ್ವರ ದೇವಸ್ಥಾನದ ಹೆಸರಿನಲ್ಲಿ ಚಿಕ್ಕ ಮೇಳವೊಂದನ್ನು ನಡೆಸುತ್ತಿದ್ದರು. ಆರ್ಥಿಕ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮೂಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

Leave a Comment