Mangaluru: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಓರ್ವ ಯುವಕನನ್ನು ಬಂಧಿಸಿದೆ. ಈ ಬಗ್ಗೆ ಮಂಗಳೂರು (Mangaluru) ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ.
ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ. ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, BNS ಕಲಂ.196, 353(2),351(3) ಯಡಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ: Mangaluru: ಉಳ್ಳಾಲ: ನಾಪತ್ತೆ ಆಗಿದ್ದ ಯುವಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ
