Home » ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ| ಶಿವಾಜಿ ಮೂರ್ತಿ ಭಗ್ನ

ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ| ಶಿವಾಜಿ ಮೂರ್ತಿ ಭಗ್ನ

0 comments

ಅನ್ಯಕೋಮಿನ ಗುಂಪೊಂದು ಹಿಂದೂ ಕಾರ್ಯಕರ್ತನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆಯೊಂದು ಬೀದರ್ ನಲ್ಲಿ ನಡೆದಿದೆ.

ನೂರ್ ಖಾನ್ ಕಾಲೋನಿಯ ಜೈ ಭವಾನಿ ಫಾಸ್ಟ್ ಫುಡ್ ನಲ್ಲಿ ಈ ಘಟನೆ ನಡೆದಿದೆ. ಬಲರಾಮ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಈ ಹಲ್ಲೆ ಉದ್ದೇಶಪೂರ್ವಕವಾಗಿಯೇ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಟೇಲ್ ನಲ್ಲಿದ್ದ ಶಿವಾಜಿ ಮೂರ್ತಿಯನ್ನು ಧ್ವಂಸ ಮಾಡಲಾಗಿದ್ದು, ಸದ್ಯ ಬಲರಾಮ್ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಬಲರಾಮ್ ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಎಂಬ ಕಾರಣಕ್ಕೆ ಅನ್ಯಕೋಮಿನ ಜನ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

You may also like

Leave a Comment