Home » ಬೆಂಗಳೂರಿನಲ್ಲಿ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0 comments

ಬೆಂಗಳೂರು : ಸಿಲಿಕಾನ್‌ ಸಿಟಿಯ ಖಾಸಗಿ ಕಾಲೇಜಿನಲ್ಲಿ ಘೋರ ದುರಂತ ಸಂಭವಿಸಿದ್ದು,  ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ  6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ

ಕಾಲೇಜಿ ಕಟ್ಟಡದಿಂದ ಜಿಗಿದ ತಕ್ಷಣ  ಕೂಡಲೇ ಶಾಲಾ ಸಿಬ್ಬಂದಿ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಲಾಗುತ್ತಿದೆ.

ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಕಾನೂನು ಪದವಿ ವ್ಯಾಸಾಂಗ ಮಾಡುತ್ತಿದ್ದ ವಾಣಿ ಬೆಂಗಳೂರಿನ ತಾಂತ್ರಿಕ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ. ಕೂಡಲೇ ಕಾಲೇಜು ಆಡಳಿತ ಮಂಡಳಿ ವಾಣಿಯನ್ನು ಆಸ್ಪತ್ರೆಗೆ ದಾಖಲಿಸಿತ್ತು. ಆದರೀಗ ಗಂಭೀರ ಸ್ಥಿತಿಯಲ್ಲಿದ್ದ ವಾಣಿ ಕೊನೆಯುಸಿರೆಳೆದಿದ್ದಾಳೆ. ಒಂದು ಪುಟದ ಪೂರ್ತಿ ಡೆತ್ ನೋಟು ಬರೆದಿಟ್ಟಿದ್ದು ಆತ್ಮಹತ್ಯೆಗೆ ಕಾರಣವೇನೆಂದು ಪೊಲೀಸ್‌ ತನಿಖೆಯ ನಂತರ ತಿಳಿಯಬೇಕಿದೆ.

You may also like

Leave a Comment