Home » ಸಿಲಿಕಾನ್‌ ಸಿಟಿ ಬೆಂಗಳೂರಲ್ಲೂ ಧರ್ಮ ದಂಗಲ್ : ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

ಸಿಲಿಕಾನ್‌ ಸಿಟಿ ಬೆಂಗಳೂರಲ್ಲೂ ಧರ್ಮ ದಂಗಲ್ : ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

0 comments

ಬೆಂಗಳೂರು: ಇಂದು ವಿ.ವಿ.ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರರನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಥೋತ್ಸವದ ವೇಳೆ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು. ಹಿಂದೂಗಳೇ ವ್ಯಾಪಾರ ಮಾಡಬೇಕು ಎಂದು ಹಿಂದೂಪರ ಸಂಘಟನೆ ಹೋರಾಟಗಾರರು ಆಗ್ರಹಿಸಿದ್ದಾರೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ.

ಬಸವನಗುಡಿಯ ರಾಷ್ಟ್ರ ರಕ್ಷಣಾ ಪಡೆಯ ಕಚೇರಿಗೆ ಪೊಲೀಸರು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಭೇಟಿ ನೀಡಿದ್ರು. ಈ ವೇಳೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವು ಕಾರ್ಯಕರ್ತರನ್ನ ಬಸವನಗುಡಿ ಪೊಲೀಸ್​ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ

You may also like

Leave a Comment