Home » ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : ಎಸ್.ಡಿ.ಪಿ.ಐ ಅಧ್ಯಕ್ಷ ಶರೀಫ್ ಜಾಮೀನು ಅರ್ಜಿ ತಿರಸ್ಕೃತ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : ಎಸ್.ಡಿ.ಪಿ.ಐ ಅಧ್ಯಕ್ಷ ಶರೀಫ್ ಜಾಮೀನು ಅರ್ಜಿ ತಿರಸ್ಕೃತ

by Praveen Chennavara
0 comments

ಬೆಂಗಳೂರು, ಏ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸೋಸಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಅಧ್ಯಕ್ಷ ಮೊಹಮ್ಮದ್ ಶರೀಫ್‌ಗೆ ಜಾಮೀನು ಸಿಕ್ಕಿಲ್ಲ.

ಹೈಕೋರ್ಟ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿರುವುದಲ್ಲದೆ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಎನ್‌ಐಎ ವಿಶೇಷ ಕೋರ್ಟ್ ತಮಗೆ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಮೊಹಮ್ಮದ್ ಶರೀಫ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯಪೀಠ ಈ ಆದೇಶ ಮಾಡಿದೆ.

You may also like

Leave a Comment