ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿರುವವರೇ, ನಿಮಗೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಹೌದು, 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ (Teacher Recruitment 2022) ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಹಾಗಾಗಿ ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದಾರೆ. 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KAR-TET 2022)ಕ್ಕೆ ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಾಗಾಗಿ ಅರ್ಹ ಅಭ್ಯರ್ಥಿಗಳು ಟಿಇಟಿ-2022ರ ಪರೀಕ್ಷೆಗೆ ( KARTET-2022 Exam) ಆನ್ಲೈನ್ ( Online) ಮೂಲಕ ಅರ್ಜಿಯನ್ನು ದಿನಾಂಕ 01-09-2022ರಿಂದ 30-09-2022 ರವರೆಗೆ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ವಯೋಮಿತಿ ಸೇರಿದಂತೆ ವಿವಿಧ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡುವಂತೆ ಪಡೆಯುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

