Home » ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

0 comments

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ವಿಧಾನ ಪರಿಷತ್‌ನಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲಾಗಿದ್ದು, ಬಹಳ ಮಹತ್ವದ ಕಾಯ್ದೆಯನ್ನು ಸರ್ಕಾರ ತಂದಿದೆ.

ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಈ ವಿಧೇಯಕ ಮಂಡನೆ ಆಗಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರಲಾಗಿತ್ತು. ಈಗ ಬಿಜೆಪಿಗೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇರುವ ಹಿನ್ನೆಲೆ ಪರಿಷತ್‌ನಲ್ಲಿ ಮಂಡಿಸಿ, ಸರ್ಕಾರ ವಿಧೇಯಕಕ್ಕೆ ಅಂಗೀಕಾರ ಪಡೆದಿದೆ.

2013 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

ಧರ್ಮ ಸಂರಕ್ಷಣೆಗೆ ಈ ಕಾಯ್ದೆ ತರಲಾಗಿದೆ. ಬಲವಂತವಾಗಿ ಮತಾಂತರಕ್ಕೆ ಮುಂದಾದರೆ ತಡೆಯಲು ಕಾಯ್ದೆ ತರುತ್ತಿದ್ದೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಮಂಗಳವಾರ ವಿಧೇಯಕವನ್ನು ಮಂಡಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದರು.ಅಷ್ಟು ಮಾತ್ರವಲ್ಲದೇ, ಈ ವೇಳೆ ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಕೂಡಾ ಮಾಡಿದರು. ಹಾಗೂ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ವಿಧೇಯಕದ ಪ್ರತಿ ಹರಿದು ಎಸೆದು ಆಕ್ರೋಶ ಹೊರ ಹಾಕಿದರು. ಗದ್ದಲದ ಮಧ್ಯೆಯೇ ಸಭಾಪತಿಗಳು ವಿಧೇಯಕ ಮಂಡಿಸಿ ಅನುಮೋದನೆ ಪಡೆದರು. ಬಿಜೆಪಿ ಸದಸ್ಯರು ವಿಧೇಯಕಕ್ಕೆ ಬೆಂಬಲಿಸಿದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.

You may also like

Leave a Comment