Home » PSI Exam: PSI ರೀ ಎಕ್ಸಾಂ ರಿಸಲ್ಟ್ ಮಾಹಿತಿ

PSI Exam: PSI ರೀ ಎಕ್ಸಾಂ ರಿಸಲ್ಟ್ ಮಾಹಿತಿ

1 comment
PSI Exam

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಪಿಎಸ್‌ಐ ಮರು ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ.

ಇದನ್ನೂ ಓದಿ: Supreme Court: ಸಂಸದರು, ಶಾಸಕರ ಮೇಲೆ ಡಿಜಿಟಲ್ ನಿಗಾ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಒಟ್ಟು 35,823 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. ಅವರಲ್ಲಿ ವಿವಿಧ ಕಾರಣಗಳಿಂದಾಗಿ 33 ಮಂದಿಯ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಅಭ್ಯರ್ಥಿಗಳು ತೆಗೆದುಕೊಂಡಿರುವ ಅಂಕಗಳನ್ನು ವೆಬ್‌ ಸೈಟ್ ನಲ್ಲಿ ಪ್ರಕಟಿಸಿದ್ದು,

ಈ ಬಗ್ಗೆ ಆಕ್ಷೇಪಗಳಿದ್ದಲ್ಲಿ ಮಾ.5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಬೇಕು. ಅದರ ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ನಂತರ ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಜನವರಿ 23ರಂದು ಮರು ಪರೀಕ್ಷೆ ನಡೆದಿತ್ತು. ಫೆ.23ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.

You may also like

Leave a Comment