Love Jihad: ಲವ್‌ಜಿಹಾದ್ ಎನ್ನುವ ಕೂಪದಲ್ಲಿ ಬಿದ್ದಿರುವ ಯುವತಿಯೋರ್ವಳು ತಾನು ಲವ್ ಜಿಹಾದ್‌ಗೆ(Love Jihad) ಸಿಲುಕಿದ್ದೇನೆ. ನನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ. ನನ್ನನ್ನು ರಕ್ಷಿಸಿ ಎಂದು ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ, ಬೆಂಗಳೂರು (Bangalore) ನಗರ ಪೊಲೀಸ್ ಹಾಗೂ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿ ನೆರವು ಕೇಳಿದ್ದಾಳೆ.
ನಾನು ಲವ್ ಜಿಹಾದ್‌ಗೆ ಒಳಗಾಗಿದ್ದೇನೆ, ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾಳೆ ಎಂದು ಟಿವಿ9 ಕನ್ನಡ ಮಾಧ್ಯಮದಲ್ಲಿ ಪ್ರಕಟಗೊಂಡಿದೆ.
ಫೇಸ್‌ಬುಕ್ ಮೂಲಕ ನನಗೆ ಕಾಶ್ಮೀರ ಯುವಕನ ಪರಿಚಯವಾಗಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಕೂಡಾ ನಡೆದಿರುವುದಾಗಿ, ಮದುವೆಯಾಗುವುದಾಗಿ ಕೂಡಾ ಮಾತುಕತೆ ನಡೆದಿತ್ತು. ಇದೀಗ ನನ್ನನ್ನು ಮದುವೆಯಾಗುವುದಿಲ್ಲ ಎಂದು ನಿರ್ಲಕ್ಷ್ಯ ಮಾಡಿದ್ದಾನೆ ಎಂದು ಯುವತಿ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾಳೆ. ಇಷ್ಟು ಮಾತ್ರವಲ್ಲದೇ ತನ್ನ ಪ್ರಾಣಕ್ಕೆ ಕುತ್ತು ಇರುವುದಾಗಿ ಆರೋಪ ಮಾಡಿದ್ದು, ಬೆಂಗಳೂರು ಪೊಲೀಸರಿಗೂ ಜೊತೆಗೆ ಕಾಶ್ಮೀರ ಪೊಲೀಸರಿಗೆ ಟ್ವೀಟ್ ಮಾಡಿದ್ದು, ಇದನ್ನು ಗಮನಿಸಿದ ಬೆಂಗಳೂರು ಪೊಲೀಸರು ಬೆಳ್ಳಂದೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಶುರುವಾದ ಒಂದೇ ತಿಂಗಳಲ್ಲಿ ಇನ್ನೊಂದು ಆಘಾತ! ಈ ನಿಯಮ ದಿಢೀರ್ ಬದಲಾವಣೆ ಮಾಡಿದ ಸರಕಾರ
