Bengaluru : ದೂರು ನೀಡಿದರು ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ತಿಳಿಸಿದ್ದಾರೆ.
ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಮಾಡಿದವರ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಈ ಬಗ್ಗೆ ಕ್ರಮ ತೆಗೆದಕೊಂಡಿಲ್ಲ. ಈ ಮೂಲಕ ತಮ್ಮ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ವಿಜಯಲಕ್ಷ್ಮಿ ದರ್ಶನ್ ಆರೋಪಿಸಿದ್ದರು. ಈ ಕುರಿತು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿರುವ ವಿಜಯಲಕ್ಷ್ಮಿ ಮಾತುಕತೆ ನಡೆಸಿದ್ದರು.
ಈ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸೀಮಂತ್ ಕುಮಾರ್ ಸಿಂಗ್ ಅವರು, ನನ್ನ ಪ್ರಕಾರ, ವಿಜಯಲಕ್ಷ್ಮಿ ಅವರ ಆರೋಪ ಸುಳ್ಳು. ಎಲ್ಲರಿಗೋಸ್ಕರ ನಾವು ಪೊಲೀಸರು ಇದ್ದೇವೆ. ಯಾವುದೇ ಒಂದು ವರ್ಗಕ್ಕಾಗಿ ಅಲ್ಲ. ನಾವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಈ ಪ್ರಕರಣದಲ್ಲಿ ಕೂಡ ನಮ್ಮವರು ತಕ್ಷಣ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
