Home » ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪಟ್ಟಿ ಪ್ರಕಟ|

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪಟ್ಟಿ ಪ್ರಕಟ|

0 comments

ಬೆಂಗಳೂರು : 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎ 22 ರಿಂದ ಮೇ.18 ರವರೆಗೆ ನಿಗದಿಪಡಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ.22 ರಿಂದ ಮೇ‌11 ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಕ್ಲಾಟ್, ಯುಜಿಎಟಿ ಎಕ್ಸಾಂ, ಮತ್ತು ನವೋದಯ ವಿದ್ಯಾಲಯ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ‌ ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

You may also like

Leave a Comment