Home » ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

0 comments

ಖ್ಯಾತ ವಿಮರ್ಶಕ, ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್​ ನಾಗಭೂಷಣ ಅವರು ನಿಧನರಾಗಿದ್ದಾರೆ.

ಡಿಎಸ್​ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಕಳೆದ 3 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನು ಧಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ ಸೇರಿದಂತೆ ಹಲವು ಕೃತಿ, ಲೇಖನಗಳನ್ನು ಬರೆದಿದ್ದಾರೆ.

You may also like

Leave a Comment