Home » Belthangady: ಬೆಳ್ತಂಗಡಿ: ನ್ಯಾಯಾಲಯದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಕುರಿತು ಸಮಾಲೋಚನಾ ಸಭೆ

Belthangady: ಬೆಳ್ತಂಗಡಿ: ನ್ಯಾಯಾಲಯದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಕುರಿತು ಸಮಾಲೋಚನಾ ಸಭೆ

0 comments

Belthangady: ನ್ಯಾಯಾಲಯದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಕುರಿತು ಸಮಾಲೋಚನಾ ಸಭೆಯನ್ನು ಜ.7ರಂದು ನಡೆಸಲಾಯಿತು. ಜ.1 ರಿಂದ 30ರವರೆಗೆ ಎಲ್ಲ ಶಾಲಾ ಕಾಲೇಜುಗಳಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ರಸ್ತೆ ಸಪ್ತಾಹದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಬೇಕೆಂದು ಬೆಳ್ತಂಗಡಿ ನ್ಯಾಯಾಧೀಶರು, ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ಮನು ಬಿ.ಕೆ. ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮನು ಬಿ.ಕೆ.ವಹಿಸಿದ್ದರು. ಹಾಗೂ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್‌ ಎಸ್‌. ಲೋಬೊ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಭೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಹಾಗೂ ಟ್ರಾಫಿಕ್ ಪಿ.ಎಸ್. ಐ. ಕಿಶೋರ್, ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ಹರ್ಷಿತ್ ಹೆಚ್., ತಹಶೀಲ್ದಾರ್ ಅವರ ಕಚೇರಿಯ ಅಧಿಕಾರಿಗಳು, ಬಿಇಓ ಕಚೇರಿಯ ಅಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಆಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಭಾಗವಹಿಸಿ ಸುರಕ್ಷಾ ಸಪ್ತಾಹವನ್ನು ಯಶಸ್ವಿಗೊಳಿಸಲು ಸೂಕ್ತ ಸಲಹೆ ಸೂಚನೆ ನೀಡಿದರು.

You may also like