Home » Mangalore: ಮಂಗಳೂರು: ಸ್ಕೂಟರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಸವಾರ ಮೃತ್ಯು

Mangalore: ಮಂಗಳೂರು: ಸ್ಕೂಟರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಸವಾರ ಮೃತ್ಯು

by ಹೊಸಕನ್ನಡ
0 comments

Mangalore: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ಜಂಕ್ಷನ್‌ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಕಾಟಿಪಳ್ಳ ಮೋ‌ರ್ ಸೂಪರ್ ಮಾರ್ಕೇಟ್ ಬಳಿಯ ನಿವಾಸಿ ಜಬ್ಬಾ‌ರ್ ಅವರು ಸೂರಜ್ ಹೋಟೇಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ ಸರ್ವಿಸ್ ರಸ್ತೆಯಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಾಹನದಿಂದ ರಸ್ತೆಗೆ ಬಿದ್ದರು ಎನ್ನಲಾಗಿದೆ.

ತಕ್ಷಣ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಹೃದಾಯಾಘಾತಕ್ಕೊಳಗಾಗಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

You may also like