Home » Parashurama park: ಕಾರ್ಕಳ: ಪರಶುರಾಮ ಥೀಂ ಪಾರ್ಕ್ ಗೆ ಹಾಕಿದ್ದ ತಾಮ್ರದ ಮೇಲ್ಛಾವಣಿ ಕಳ್ಳತನ!

Parashurama park: ಕಾರ್ಕಳ: ಪರಶುರಾಮ ಥೀಂ ಪಾರ್ಕ್ ಗೆ ಹಾಕಿದ್ದ ತಾಮ್ರದ ಮೇಲ್ಛಾವಣಿ ಕಳ್ಳತನ!

0 comments

Parashurama park: ಕಳೆದ ಎರಡ್ಮೂರು ವರ್ಷದಿಂದ ಸಾಕಷ್ಟು ವಿವಾದ ಸೃಷ್ಟಿಸಿದ್ದ ಕಾರ್ಕಳದ (Karkala) ಪರಶುರಾಮ ಥೀಂ ಪಾರ್ಕ್‌ನಲ್ಲಿ (Parashurama Park) ಇದೀಗ ಕಳ್ಳತನ ನಡೆದಿದ್ದು, ಮೇಲ್ಮಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ (Theft) ಮಾಡಿದ್ದಾರೆ ಎಂದು ಶಾಸಕ ಸುನೀಲ್ ಕುಮಾರ್ (Sunil Kumar) ಆರೋಪಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಗೂ ಮೊದಲು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲಿರುವ ಥೀಂ ಪಾರ್ಕ್‌ ಉದ್ಘಾಟಿಸಿದ್ದರು.ಇದೀಗ ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಥೀಂ ಪಾರ್ಕ್‌ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಮಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ.ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ರಾಜಕಾರಣಕ್ಕೆ ಕಳೆದ ಎರಡು ವರ್ಷದಿಂದ ಈ ಯೋಜನೆಯ ಅಭಿವೃದ್ಧಿಗೆ ಬಿಡಿಕಾಸು ಬಿಡುಗಡೆಯಾಗದಂತೆ ಮಾಡಿ ಪರಶುರಾಮ ಥೀಂ ಪಾರ್ಕ್‌ ಅಕ್ಷರಶಃ ಪಾಳು ಬಿದ್ದು ಹೋಗುವಂತೆ ಮಾಡಿದರು. ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿಕೊಟ್ಟು ನಳನಳಿಸಬೇಕಿದ್ದ ಈ ಪ್ರವಾಸಿ ತಾಣ ಕಾಂಗ್ರೆಸ್ ನಾಯಕರ ರಾಜಕೀಯದಾಟದಿಂದಾಗಿ ಇಂದು ಕಳ್ಳರು ನುಗ್ಗಿ ಮೇಲ್ಮಾವಣಿಯನ್ನೇ ಕದ್ದೊಯ್ಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ್ ದೂರಿದ್ದಾರೆ.ಅಷ್ಟಕ್ಕೂ ಈ ಪ್ರಕರಣದಲ್ಲಿ ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ.

ಥೀಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶವನ್ನು ನಿರಾಕರಿಸಿ (ಸೆಪ್ಟೆಂಬರ್ 2023) ಸ್ಥಳೀಯ ಆಡಳಿತ ಆದೇಶ ಹೊರಡಿಸಿದ್ದರೂ ಕೆಲವರು ಕಾನೂನು ಬಾಹಿರವಾಗಿ ಇಲ್ಲಿಗೆ ಒಳನುಗ್ಗಿ ವಿಡಿಯೋ ಚಿತ್ರೀಕರಣ ನಡೆಸಿದ್ದರು. ಇದೆಲ್ಲದರ ಮಧ್ಯೆಯೇ ಕಳ್ಳತನ ನಡೆದಿದೆ.ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದವರನ್ನೂ ವಿಚಾರಣೆಗೆ ಒಳಪಡಿಸುವ ಜತೆಗೆ ಕಳ್ಳತನ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತೇನೆ. ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು ಎಂದು ಶಾಸಕರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

You may also like