Bollywood: ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty) ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಕ್ಷಮೆಯಾಚಿಸಿದ್ದಾರೆ.
ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ. ಸಮುದಾಯ ಆರಾಧಿಸುವ ಚಾಮುಂಡಿದೇವಿಯನ್ನು ಹೆಣ್ಣು ದೆವ್ವ ಎಂದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
