Home » Mahindra Thar : ಹೊಸದಾಗಿ ಗ್ರಾಹಕರನ್ನು ಮನಸೂರೆಗೊಳ್ಳಲು ಬರುತ್ತಿದೆ ಮಹೀಂದ್ರಾ ಥಾರ್!!!

Mahindra Thar : ಹೊಸದಾಗಿ ಗ್ರಾಹಕರನ್ನು ಮನಸೂರೆಗೊಳ್ಳಲು ಬರುತ್ತಿದೆ ಮಹೀಂದ್ರಾ ಥಾರ್!!!

1 comment
Mahindra Thar

Mahindra Thar: ಹೊಸ ವರ್ಷದಲ್ಲಿ ಆಟೊಮೊಬೈಲ್ (Automobile )ಕ್ಷೇತ್ರವು ಸಾಕಷ್ಟು ಸುಧಾರಣೆ ಕಂಡಿದ್ದು, 2023ರ ಅಂಕಿ ಅಂಶ ಪ್ರಕಾರ ಕಾರು (Car) ಉದ್ಯಮದ ಮಾರುಕಟ್ಟೆಯಲ್ಲಿ (Market ) ಭಾರತದಲ್ಲಿ( India)ಅತಿ ಹೆಚ್ಚು ಮಾರಾಟವಾದ ಟಾಪ್ 5 ಕಾರುಗಳ ಪೈಕಿ ಮಾರುತಿ ಸುಜುಕಿ(Maruti Suzuki) ಅಗ್ರಗಣ್ಯ ಸ್ಥಾನದಲ್ಲಿದ್ದು, ಇದರ ನಡುವೆ ಇದಕ್ಕೆ ಪೈಪೋಟಿ ನೀಡಲು ಉಳಿದ ಕಾರು ತಯಾರಕ ಕಂಪನಿಗಳು ಮಾರುಕಟ್ಟೆಯಲ್ಲಿ ಹೊಸ ಹೊಸ ಪ್ರಯೋಗಗಳನ್ನು ನಡೆಸುತ್ತಿದೆ. ಮಹೀಂದ್ರಾ ಥಾರ್ (Mahindra Thar)ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿ ಗುರುತಿಸಿಕೊಂಡಿದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿ ಮಾಡಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದ್ದು, ಹೀಗಾಗಿ ತನ್ನ ವೈಶಿಷ್ಟ್ಯದ ಮೂಲಕ ಹೆಚ್ಚಿನ ಮಂದಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಹೀಂದ್ರಾ ಥಾರ್ (Mahindra Thar)ಎಸ್‍ ಯುವಿಯ(SUV) ವೈಶಿಷ್ಟ್ಯದ ಬಗ್ಗೆ ಗಮನ ಹರಿಸಿದರೆ, ಇದು ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರಲಿದ್ದು, ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಒಳಗೊಂಡಿದೆ. ಮಹೀಂದ್ರಾ ಥಾರ್ ಎಸ್‍ಯುವಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಅನೇಕ ವಿಶೇಷತೆಗಳನ್ನು ಒಳಗೊಂಡಿದೆ. ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4×4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ. ಈ ಎಸ್‍ಯುವಿಯ ವಿನ್ಯಾಸ ಮತ್ತು ಫೀಚರ್ಸ್ ಗಳಲ್ಲಿ ಯಾವುದೇ ಬದಲಾವಣೆಗಳನ್ನು ಒಳಗೊಂಡಿಲ್ಲ.

ಈ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಒಳಗೊಂಡಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿದೆ.ಕೆಲ ವರದಿಗಳ ಅನುಸಾರ, ಥಾರ್ ಶೀಘ್ರದಲ್ಲೇ RDE ಮಾನದಂಡಗಳನ್ನು ಮತ್ತು E20 ಇಂಧನ-ಸಿದ್ಧ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳನ್ನು ಒಳಗೊಂಡಿದೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಮನ್ನಣೆ ಪಡೆದುಕೊಂಡು ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಗೆ ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾ ಕೂಡ ಅಳವಡಿಸಲಾಗಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್( Petrol)ಕಾರಿನ ಆಯ್ಕೆಯನ್ನು ಕೂಡ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆ ಮಾಡಲು ಕಾರಣ ಎನ್ನಲಾಗಿದೆ.

ಮಹೀಂದ್ರಾ ಥಾರ್ ತನ್ನ 2023ರ ನವೀಕರಣ ಮಾಡಲು ಅಣಿಯಾಗಿದೆ ಎನ್ನಲಾಗಿದೆ. ಈ ನವೀಕರಣವು BS6 2-ಕಂಪ್ಲೈಂಟ್ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್‌ಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ. ಈ ನಡುವೆ ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್‍ಯುವಿಗೆ ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್ (Mahindra Thar) ಜೊತೆಗೆ ಪೈಪೋಟಿ ನೀಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಒಂದೇ ವಾಟ್ಸಾಪ್ ಖಾತೆಯನ್ನು 4 ಮೊಬೈಲ್ ಗಳಲ್ಲಿ ಬಳಸಬಹುದೇ? ಲಿಂಕ್ ಮಾಡಬಹುದಾದ ಐಡಿಯಾ ಇಲ್ಲಿದೆ ಓದಿ

You may also like

Leave a Comment