KPSC-Recruitment 2023: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಿ, (KPSC-Recruitment 2023) ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.
ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ ನೀಡಿದ್ದು, ಫೆಬ್ರವರಿ 25 ರಂದು ನಡೆದ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು KPSC ಏಪ್ರಿಲ್ 12 ರಂದು ನಡೆಸುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯಬೇಕಾಗಿಲ್ಲ ಎಂದು ಆಯೋಗ ತಿಳಿಸಿದೆ.
ಫೆಬ್ರವರಿ 25 ರಂದು ನಡೆದ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಆದರೆ ಫಲಿತಾಂಶದ ಪಟ್ಟಿ ಸಿದ್ಧವಾಗಿದೆ. ಇದರ ಪ್ರಕಟಣೆಗೆ ಆಯೋಗದಿಂದ ಸಮ್ಮತಿ ಸಿಕ್ಕಿಲ್ಲ. ಈ ಮಧ್ಯೆ ಏ. 12 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇದ್ದು, ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಒದಗಿಸದಂತೆ ವೆಬ್‌ಸೈಟ್‌ನ ತಾಂತ್ರಿಕ ತಂಡಕ್ಕೆ ಸೂಚಿಸಲಾಗಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ಯಾವೆಲ್ಲಾ ಹುದ್ದೆಗೆ ಏ. 12 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ?
• ಮುದ್ರಣ, ಲೇಖನ ಸಾಮಾಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ -2 ಹುದ್ದೆ,
• ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರ- 8 ಹುದ್ದೆ,
• ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆನಯಲ್ಲಿನ ನಗರಯೋಜಕರ -23 ಹುದ್ದೆ
ಅಭ್ಯರ್ಥಿಗಳು ಫೆ. 25ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆದಿದ್ದು, ಅವರಿಗೆ ಏ. 12 ರಂದು ನಡೆಯಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಕೆಪಿಎಸ್‌ಸಿಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗದೇ ಇದ್ದರೆ, ನೀವು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದೀರ ಎಂದರ್ಥ. ಮತ್ತೆ ಏ. 12 ರ ಪರೀಕ್ಷೆ ಬರೆಯುವ ಆಗತ್ಯವಿರುವುದಿಲ್ಲ.
ದಿನಾಂಕ: 15-12-2022 ರಂದು ವೇಳಾಪಟ್ಟಿ ಪ್ರಕಟಿಸಿದ್ದು, ಅದರಲ್ಲಿನ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ದಿನಾಂಕ 21-01-2023 ಮತ್ತು 22-01-2023ರಂದು ಪರೀಕ್ಷೆ ನಿಗದಿಪಡಿಸಲಾಗಿರುವ ಹುದ್ದೆಗಳಿಗೆ ಕಳೆದ ಫೆಬ್ರವರಿ 25 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಕೆಪಿಎಸ್‌ಸಿಯು ಅರ್ಜಿ ಸಲ್ಲಿಸುವಾಗಲೇ ಮಾಹಿತಿ ನೀಡುತ್ತಿದ್ದು, ಅಭ್ಯರ್ಥಿಗಳು ದಿನಾಂಕ 29-11-22 ರ ನಂತರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆದಿದ್ದರೆ ಮಾಹಿತಿ ಒದಗಿಸಿ ಎಂದು ಹೇಳಲಾಗಿದ್ದು, ಕೆಪಿಎಸ್‌ಸಿಯು ಅವರಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡಲು ನಿರ್ಧರಿಸಿದೆ.
ವೆಬ್‌ಸೈಟ್ : https://kpsc.kar.nic.in/
ಇದನ್ನೂ ಓದಿ: SBI Card : ಬಿಗ್ ಶಾಕ್! ಬ್ಯಾಂಕ್ ಗ್ರಾಹಕರ ಕೆಲವು ಕ್ಯಾಶ್‌ಬ್ಯಾಕ್ ಸೇವೆ ಹಿಂದಕ್ಕೆ!!
