3
Indian Army chopper crash: ಇಂದು (ಮೇ 4) ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ ಜಿಲ್ಲೆಯ ಮರ್ವಾ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಎಎಲ್ಹೆಚ್ ಧ್ರುವ್ ಪತನಗೊಂಡಿದೆ (Indian Army chopper crash).
ಸೇನಾ ಹೆಲಿಕಾಪ್ಟರ್’ನಲ್ಲಿ ಮೂವರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಪರಿಣಾಮ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೇ ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
“ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಎಎಲ್ಹೆಚ್ ಧ್ರುವ್ ಹೆಲಿಕಾಪ್ಟರ್ ಪತನಗೊಂಡಿತ್ತು. ಕೂಡಲೇ ರಕ್ಷಣಾ ತಂಡಗಳು ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿವೆ” ಎಂದು ಕಿಶ್ತ್ವಾರ್ ಎಸ್‌ಎಸ್‌ಪಿ ಖಲೀಲ್ ಪೋಸ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಚುನಾವಣೆಗೂ ಮುನ್ನವೇ ಗುಡ್ ನ್ಯೂಸ್ ಕೊಟ್ಟ ಮೋದಿ, ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ !
