Home » Kodi Mutt Shree Prediction: ಕರ್ನಾಟಕ ವಿಧಾನಸಭೆ ಚುನಾವಣೆ, ಕೋಡಿ ಶ್ರೀ ಯಿಂದ ಭವಿಷ್ಯವಾಣಿ!

Kodi Mutt Shree Prediction: ಕರ್ನಾಟಕ ವಿಧಾನಸಭೆ ಚುನಾವಣೆ, ಕೋಡಿ ಶ್ರೀ ಯಿಂದ ಭವಿಷ್ಯವಾಣಿ!

1 comment

Kodi Mutt Shree Prediction: ವಿಧಾನಸಭಾ ಚುನಾವಣೆಗೆ (Karnataka Election 2023) ಸ್ಪರ್ಧಿಸಲು ಜಿದ್ದಾಜಿದ್ದಿ ನಡೆಯುತ್ತಿವೆ. ಘಟಾನುಘಟಿಗಳು ಸ್ಪರ್ಧೆಗೆ ಇಳಿಯುತ್ತಿದ್ದಾರೆ. ಪಕ್ಷಗಳು ಭಾರೀ ಪ್ರಚಾರ ನಡೆಸುತ್ತಿವೆ. ಈ ಮಧ್ಯೆ ಇದೀಗ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಯವರು ಕರ್ನಾಟಕ ವಿಧಾನಸಭೆ ಚುನಾವಣೆಯ ಬಗ್ಗೆ ಭವಿಷ್ಯವಾಣಿ (Kodi Mutt Shree Prediction) ನುಡಿದಿದ್ದಾರೆ.

ಕೋಡಿಮಠ ಶ್ರೀಗಳು (Kodi Mutt Shree) ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹೇಳಿದ್ದು, “ಈ ಬಾರಿ ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಬರುವುದಿಲ್ಲ. ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ” ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸದ್ಯ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಕುತೂಹಲ ಹೆಚ್ಚಾಗಿದೆ. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಇದೀಗ ಶ್ರೀಗಳ ಭವಿಷ್ಯವಾಣಿ ಭಾರೀ ವೈರಲ್ ಆಗಿದೆ.

ಈ ಹಿಂದೆ ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ‌ ಸಂಯುಕ್ತ ಅವರ ನಿವಾಸಕ್ಕೆ‌ ಭೇಟಿ ನೀಡಿ‌ದ್ದ ಸಂದರ್ಭ ಶ್ರೀಗಳು ಈ ಹೊಸ ವರ್ಷದಲ್ಲಿ ನಡೆಯಲಿರುವ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ತಲೆದೋರಲಿದ್ದು, ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದು , ಸಾಧು ಸಂತರಿಗೆ ತೊಂದರೆ ಉಂಟಾಗಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ:  ನನ್ನ ಸಂಪೂರ್ಣ ಬೆಂಬಲ ಬಿಜೆಪಿಗೆ ಎನ್ನುತ್ತ, ಕೊನೆ ಗಳಿಗೆಯಲ್ಲಿ ಕೈಕೊಟ್ಟ ‘ಸ್ವಾಭಿಮಾನಿ ಸಂಸದೆ’ ಸುಮಲತಾ! ಮಂಡ್ಯದಲ್ಲಿ ಬಿಜೆಪಿಗರ ಆಕ್ರೋಶ!

You may also like

Leave a Comment