4
Imran Khan Arrest: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್’ನನ್ನು (Imran Khan Arrest) ಅರೆಸ್ಟ್ ಮಾಡಲಾಗಿದೆ. ಮಾಜಿ ಪ್ರಧಾನಿ ಹಾಗೂ ಪಿಟಿಐ ಮುಖ್ಯಸ್ಥನಾದ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ (ಐಎಸ್ಸಿ) ಹೊರಗೆ ರೇಂಜರ್ಸ್ ಬಂಧಿಸಿದ್ದಾರೆ. ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜಧಾನಿಯ ನ್ಯಾಯಾಲಯಕ್ಕೆ ಸೇರಿದ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಸೆಷನ್ಸ್ ನ್ಯಾಯಾಲಯವು ಖಾನ್‌ಗೆ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಆಗಸ್ಟ್ 20 ರಂದು ಎಫ್ -9 ಪಾರ್ಕ್‌ನಲ್ಲಿ ನಡೆದ ರ್ಯಾಲಿಯಲ್ಲಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಝೀಬಾ ಚೌಧರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಬಂಧಿಸಲಾಗಿದೆ.
