siddaramaiah: ನವದೆಹಲಿ : ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ನೂತನ ಸಿಎಂ ಆಗಿ ಆಯ್ಕೆಯಾದ ಬೆನ್ನಲ್ಲೆ ಸಿದ್ದರಾಮಯ್ಯ (siddaramaiah) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು,ಎಐಸಿಸಿ ನಿರ್ಧಾರಕ್ಕೆ ನಾನು ಬದ್ದಎಂದಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ವೇಣುಗೋಪಾಲ್ ಮಾತನಾಡಿ,ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆಲುವನ್ನು ಸಾಧಿಸಿದೆ. ಸಿದ್ದರಾಮಯ್ಯ ಡಿಕೆಶಿ ಪ್ರಬಲ ನಾಯಕರಾಗಿದ್ದಾರೆ ಈ ಕಾರಣದಿಂದಾಗಿ ಕಾಂಗ್ರೆಸ್ ಭಾರೀ ಬಹುಮತದಿಂದ ಗೆದ್ದಿದೆ ಎಂದಿದ್ದಾರೆ ಅಲ್ಲದೇಕಾಂಗ್ರೆಸ್ ಎನ್ನುವುದು ಪ್ರಜಾಪ್ರಭುತ್ವದ ಪಕ್ಷ ಎಂದು ಹೇಳಿದರು. ಈಗಾಗಲೇ ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ನಡೆಸಲಾಗುತ್ತಿದೆ.
ಇದನ್ನು ಓದಿ: 7th pay commission: ಸರ್ಕಾರಿ ನೌಕರರಿಗೆ ಸಿಹಿಸುದ್ದಿ ; ತುಟ್ಟಿಭತ್ಯೆ ಹೆಚ್ಚಳಕ್ಕೆ ಘೋಷಣೆ!!
