D K Shivakumar: ಯಾವುದೇ ಕಾರಣಕ್ಕೂ ನಾವು ಪೊಲೀಸ್ ಇಲಾಖೆಯನ್ನು (Police Department) ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಹೌದು, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DCM D K Shivakumar) ಇಬ್ಬರೂ ಸೇರಿ ನಿನ್ನೆ ದಿನ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ(Police Officer’s) ಡಿಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು
“ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು(Mangalore), ಬಿಜಾಪುರ(Vijapur), ಬಾಗಲಕೋಟ(Bagalkote)ದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕಿಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎಂಬುದು ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಬಿಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಲ್ಲದೆ “ಇಷ್ಟು ದಿನ ಪೊಲೀಸರು ಬಿಜೆಪಿ(BJP) ಪರ ಕೆಲಸ ಮಾಡಿದ್ದು ಗೊತ್ತಿದೆ. ನಾಲ್ಕು ವರ್ಷಗಳ ನಿಮ್ಮ ವರ್ತನೆಗಳು ನಮಗೆ ತಿಳಿದಿದೆ. ಇನ್ನಾದರೂ ಉತ್ತಮ ಕೆಲಸ ಮಾಡಿ. ಸಿದ್ದರಾಮಯ್ಯರ ಜೊತೆ ಪೊಲೀಸರು ನಡೆದುಕೊಂಡ ರೀತಿ ತಿಳಿದಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದರೂ ಕೇಸ್ ಹಾಕಿಲ್ಲ. ನಿಮ್ಮ ಕೆಲಸಗಳನ್ನು ಚೆನ್ನಾಗಿ ಗಮನಿಸಿದ್ದೇವೆ ಇನ್ನೂ ಇದೆಲ್ಲ ನಡೆಯುವುದಿಲ್ಲ ಎಂದಿದ್ದಾರೆ.
ಇಷ್ಟೇ ಅಲ್ಲದೆ ಪಿಎಸ್ಐ(PSI) ಅಕ್ರಮದಲ್ಲಿ ಒಬ್ಬ ಎಡಿಜಿಪಿ(ADGP) OMR ಪ್ರತಿಯನ್ನು ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ಗೊತ್ತಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹರಾಸ್ ಮಾಡಿದ್ದೀರಾ. ಪ್ರಿಯಾಂಕ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನು ಹಾಳು ಮಾಡಿದ್ದೀರ. ಎಲ್ಲಿ ನೋಡಿದರೂ ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು ಎಂದು ಡಿಕೆಶಿ ಖಡಕ್ ಸೂಚನೆ ನೀಡಿದರು.
