Ration: ಜೂನ್ 2 ರಂದು ಕರ್ನಾಟಕ ರಾಜ್ಯದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಸುಧೀರ್ಘವಾಗಿ ಚರ್ಚೆ ನಡೆಸಿ ನಂತರ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಬಗೆಗಿನ ಘೋಷಣೆ ಮಾಡಿದೆ. ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯದ ಬಗ್ಗೆಯೂ ಹೇಳಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ ಆಹಾರ ಧಾನ್ಯ 10 ಕೆಜಿ ಲಭ್ಯವಾಗಲಿದೆ. ಜುಲೈ 1 ರಿಂದ ಎಲ್ಲಾ ಬಿಪಿಎಲ್ ನವರಿಗೆ 10 ಕೆಜಿ ಕೊಡ್ತೇವೆ. ಬಿಪಿಎಲ್ ಮತ್ತು ಅಂತ್ಯೋದಯದವರಿಗೆ ಕೂಡಾ 10 ಕೆಜಿ ಅಕ್ಕಿ (Ration) ಸಿಗಲಿದೆ ಎಂದು ಘೋಷಣೆ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 10 ಕೆಜಿ ಆಹಾರ ಧಾನ್ಯ ವಿತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ಅಕ್ಕಿ ವಿತರಣೆ ಜು.1 ರಿಂದ ಜಾರಿಯಾಗಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, “ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತಿಯೊಬ್ಬರಿಗೂ 7 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಇದನ್ನು 5 ಕೆಜಿಗೆ ಇಳಿಸಿತ್ತು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮನೆಯ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರ ಧಾನ್ಯ ಒದಗಿಸುವುದಾಗಿ ಚುನಾವಣಾ ಪ್ರಣಾಳಿಕೆ ವೇಳೆ ಹೇಳಿದ್ದೇವು. ಅದರಂತೆ ಜುಲೈ 1 ರಿಂದ ಆಹಾರ ಧಾನ್ಯ ವಿತರಿಸಲಾಗುವುದು” ಎಂದು ತಿಳಿಸಿದ್ದಾರೆ.
ಇದನ್ನು ಓದಿ: Seats Reservation In KSRTC : KSRTC ಬಸ್ ಗಳಲ್ಲಿ ಪುರುಷರಿಗೆ 50% ಸೀಟು ಮೀಸಲು, ಇದು ದೇಶದಲ್ಲೇ ಮೊದಲು !
