Prathibha puraskara 2023: ರಾಜ್ಯ ಸರಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘವು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ (Prathibha puraskara 2023). 2023ನೇ ಸಾಲಿನ SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಶೇಕಡಾಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್ :https://bit.ly/ksgeapp2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2023
ವಿದ್ಯಾರ್ಥಿ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರಕಾರದ ಯಾವುದೇ ಹುದ್ದೆಯಲ್ಲಿ ಖಾಯಂ ನೌಕರರಾಗಿರಬೇಕು. ಹಾಗೆನೇ ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚಿಸಲಾಗಿದೆ.
ಬೇಕಾಗುವ ದಾಖಲೆಗಳು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಗೊಂಡ ದೃಢೀಕೃತ ಅಂಕಪಟ್ಟಿ. ಪಾಸ್‌ಪೋರ್ಟ್ ಅಳತೆಯ ಫೋಟೋ, ಇಲಾಖೆಯ ಸೇವಾ ದೃಢೀಕರಣ ಪತ್ರ, ಸಂಘದ ಜಿಲ್ಲಾ/ತಾಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. ಜೆಪಿಜಿ ಫಾರ್ಮೆಟ್‌ನಲ್ಲಿ ಒಂದು ಎಂಬಿ ಮೀರದ ರೀತಿಯಲ್ಲಿ ಅಪ್‌ಲೋಡ್ ಮಾಡಬೇಕು, ನಿಮ್ಮೆಲ್ಲ ಅರ್ಜಿ ಸಲ್ಲಿಕೆಯ ನಂತರ ನೋಂದಾಯಿತ ಇ-ಮೇಲ್ ಮೆಸೇಜ್ ಬರುತ್ತದೆ. ಶೇಕಡವಾರು ಅಂಕ ನಿರ್ಧರಿಸಿ ಅರ್ಜಿ ಪರಿಗಣಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದು;
ಕೇಂದ್ರ ಕಛೇರಿಯ ವ್ಯವಸ್ಥಾಪಕ ಸುರೇಶ ಎನ್. (080-22354784/83)
ಲೆಕ್ಕ ಸಹಾಯಕ ಸೈಯದ್ ಜಬಿ (9902135813)
ಇದನ್ನೂ ಓದಿ: CET Results: ಜೂ.15 ರಂದು ಸಿಇಟಿ ಫಲಿತಾಂಶ ಪ್ರಕಟ
