Shivamogga: ಕಾಂಗ್ರೆಸ್ ಸರಕಾರ ಇತ್ತೀಚೆಗೆ ಅಧಿಕಾರಕ್ಕೆ ಬಂದು ಗ್ಯಾರಂಟಿಗಳ ಮಹಪೂರವನ್ನೇ ಕೊಟ್ಟಿದ್ದು, ಅದರ ಜೊತೆಯಲ್ಲಿ 200 ಯುನಿಟ್ ಉಚಿತ ವಿದ್ಯುತ್ ಫ್ರೀ ಎಂಬ ಭರವಸೆ ಕೂಡಾ ನೀಡಿದ್ದು, ಇದರ ಬೆನ್ನಲ್ಲೇ ವಿದ್ಯುತ್ ಏರಿಕೆ ಮಾಡಿ ಜನರ ಆಕ್ರೋಶ ಹೆಚ್ಚುವಂತೆ ಮಾಡಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಭಾರೀ ಪ್ರತಿಭಟನೆಯನ್ನು ಬಿಜೆಪಿ ಮುಖಂಡರು ಮಾಡಿದ್ದಾರೆ.
ಶಿವಮೊಗ್ಗ (Shivamogga) ನಗರದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಬಿವೈ ರಾಘವೇಂದ್ರ (BY Raghavendra) ಹಾಗೂ ಇತರ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಸ್ಕಾಂ ಕಚೇರಿಯನ್ನು ಬಿಜೆಪಿ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡಿದ್ದು, ಇದಕ್ಕೆ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಲಾಯಿತು.
ಜೂನ್ 18 ರಂದು ಬಿಜೆಪಿ ಕಾರ್ಯಕರ್ತರು ವಿದ್ಯುತ್ ಬೆಲೆಯೇರಿಕೆ ವಿರುದ್ಧ ಭಾರಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಈ ಪ್ರತಿಭಟನೆ ನಡೆಯಲಿದೆ.
