Ayodhya Sri Rama Mandir: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಇಂದು ಅಯೋಧ್ಯೆ ಶ್ರೀರಾಮ ಮಂದಿರದ ಬಗೆಗಿನ ಮಹತ್ವ ಮಾಹಿತಿ ನೀಡಿದ್ದಾರೆ.
ಹೌದು, ಮಂಗಳೂರಿನಲ್ಲಿ ಮಾತನಾಡಿದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು, ಅಯೋಧ್ಯೆ ಶ್ರೀರಾಮ ಮಂದಿರ (Ayodhya Sri Rama Mandir) ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮಕರ ಸಂಕ್ರಾಂತಿ ಕಳೆದು ಒಂದು ವಾರದೊಳಗೆ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ದಲ್ಲಿ ಇತರ ದೇವಸ್ಥಾನಗಳಂತೆ ಸೇವೆಯ ಪಟ್ಟಿ ಇರುವುದಿಲ್ಲ . ಸಾಮಾನ್ಯವಾಗಿ ಭಕ್ತರು ದೇವಸ್ಥಾನ ಗಳಿಗೆ ಹೋದಾಗ ಅಲ್ಲಿನ ಸೇವೆಯ ಪಟ್ಟಿಯನ್ನು ನೋಡಿ ದೇವಸ್ಥಾನದಲ್ಲಿ ಸೇವೆ ನೀಡುತ್ತಾರೆ.
ಆದರೆ ಈ ರೀತಿಯ ವ್ಯವಸ್ಥೆ ಅಯೋಧ್ಯೆ ಶ್ರೀ ರಾಮ ಮಂದಿರ ದಲ್ಲಿ ಇರುವುದಿಲ್ಲ.
ಶ್ರೀ ರಾಮ ಮಂದಿರದಲ್ಲಿ ಯಾವುದೇ ಸೇವೆಯು ಭಕ್ತರಿಗೆ ಇರದೆ ಇದ್ದರೂ ಭಕ್ತರೂ ತಮ್ಮ ಇಷ್ಟಾನುಸಾರ ಕಾಣಿಕೆ ಗಳನ್ನು ಕಾಣಿಕೆ ಡಬ್ಬಿಗೆ ಹಾಕಬಹುದು ಎಂದರು. ಶ್ರೀ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನನಗೂ ಸಂಬಂಧ ಇಲ್ಲ. ರಾಮ ಸೇವೆ ಮಾಡುವುದೆ ದೇಶ ಸೇವೆ. ಯಾರೂ ಏನೂ ಬೇಕಾದರೂ ಮಾಡಲಿ ಎಂದರು.
ಇನ್ನು ಮುಖ್ಯವಾಗಿ ಭಾರತದ ಪುಣ್ಯ ಭೂಮಿಯಲ್ಲಿ ಗೋ ಹತ್ಯೆ ನಡೆಯಬಾರದು. ಅದು ನಮ್ಮ ಸಂಸ್ಕೃತಿ ಅಲ್ಲ. ಅಲ್ಲದೆ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯುವ ದುಸ್ಸಾಹಸಕ್ಕೆ ಮಾಡುವುದು ಸರಿಯಲ್ಲ. ಹಿಂದು ಸಂಘಟನೆಗಳು ಇದನ್ನು ತಡೆಯಬೇಕು. ಆದರೆ ನೇರವಾಗಿ ಧುಮುಕದೆ ಪೊಲೀಸ್ ಇಲಾಖೆಯ ಮೂಲಕ ಪ್ರತಿಭಟಿಸಿ ತಡೆಗಟ್ಟಲು ಪ್ರಯತ್ನಿಸಬೇಕು ಎಂದರು.
ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದ ಅವರು, ಮಳೆಗಾಲದ ಸಂದರ್ಭದಲ್ಲಿ ಯತಿಗಳು ಚಾತುರ್ಮಾಸ್ಯ ಆಚರಿಸಬೇಕೆಂದು ನಿಯಮವಿದೆ. ಈ ಚಾತುರ್ಮಾಸ್ಯ ಸಂದರ್ಭದಲ್ಲಿ ಹೊರಗಡೆ ಸಂಚಾರ ನಿಷೇಧವಿದೆ. ಅದರಂತೆ ಜು. 3 ರಿಂದ ಮೈಸೂರಿನಲ್ಲಿ ನಾಲ್ಕು ತಿಂಗಳು ಚಾತುರ್ಮಾಸ್ಯ ಆಚರಿಸಲಿದ್ದೇನೆ ಎಂದಿದ್ದಾರೆ.
ಇದನ್ನು ಓದಿ: Eid al-Adha: ಬಕ್ರೀದ್ಗೆಂದು ತಂದ ಮೇಕೆಗಳ ಎದುರು ಹನುಮಾನ್ ಚಾಲೀಸಾ ಪಠಣ, ಯಾಕೆ ಗೊತ್ತಾ ?
