Home » Super star Rajanikanth: ದಿಢೀರ್ ಆಗಿ ಈ ದೇವಾಲಯಕ್ಕೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನಿಕಾಂತ್ !! ‘ತಲೈವಾ’ ನಂಬುವ ಆ ದೈವ ಯಾವುದು ?

Super star Rajanikanth: ದಿಢೀರ್ ಆಗಿ ಈ ದೇವಾಲಯಕ್ಕೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನಿಕಾಂತ್ !! ‘ತಲೈವಾ’ ನಂಬುವ ಆ ದೈವ ಯಾವುದು ?

by ಹೊಸಕನ್ನಡ
0 comments
Super star Rajanikanth

Super star Rajanikanth: ಸೂಪರ್ ಸ್ಟಾರ್ ರಜನಿಕಾಂತ್(Super star Rajanikanth), ತಮ್ಮ ಮಗಳು ಐಶ್ವರ್ಯ ನಿರ್ದೇಶನದ ಲಾಲ್ ಸಲಾಮ್​ ಸಿನಿಮಾದಲ್ಲಿ ಗೆಸ್ಟ್​ ರೋಲ್​ನಲ್ಲಿ(Guest roal) ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್​ ವೇಳೆ ರಜನಿಕಾಂತ್​ ಅವರು ಇದ್ದಕ್ಕಿದ್ದಂತೆ ಪ್ರಸಿದ್ಧ ದೇವಾಲಯಕ್ಕೆ(Temple)ಭೇಟಿ ಕೊಟ್ಟು ದೇವರ ದರ್ಶನ ಪಡೆದುಕೊಂಡಿದ್ದಾರೆ. ಹಾಗಿದ್ರೆ ತಲೈವ ನಂಬುವ ದೇವಾರುವುದು ಗೊತ್ತಾ?

ಹೌದು, ತಮಿಳು ಚಿತ್ರದ ರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ದಿನ(ಜುಲೈ 4) ತಮಿಳು ನಾಡಿನ (Tamil Nadu) ಸುಪ್ರಸಿದ್ಧ ಅಣ್ಣಾಮಲೈಯಾರ್ (Annamalaiyar) ದೇವಸ್ಥಾನಕ್ಕೆ ಭೇಟಿ ನೀಡಿದರು. ಸದ್ಯ ರಜನಿ ಲಾಲ್ ಸಲಾಮ್ (Lal Salaam)ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣ ನಡುವೆ ಕೊಂಚ ಸಮಯ ಮಾಡಿಕೊಂಡು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಯಾವುದೇ ಭಾಗದಲ್ಲಿ ಚಿತ್ರೀಕರಣ ಆಗುತ್ತಿರಲಿ, ಆ ಭಾಗದಲ್ಲಿರುವ ಸುಪ್ರಸಿದ್ಧ ದೇವಸ್ಥಾನಗಳಿಗೆ (Temple) ಭೇಟಿ ನೀಡಿ ಪೂಜೆ ಸಲ್ಲಿಸುವುದು ರಜನಿ ವಾಡಿಕೆ. ಅದರಂತೆ ಲಾಲ್ ಸಲಾಮ್ ಚಿತ್ರೀಕರಣ ಸಮಯದಲ್ಲೇ ಪೂಜೆ ಸಲ್ಲಿಸಿ ಸ್ವಲ್ಪ ಹೊತ್ತು ದೇವಸ್ಥಾನದಲ್ಲೇ ಕಳೆದಿದ್ದಾರೆ. ರಜನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದ್ದಂತೆ ಅವರ ಅಭಿಮಾನಿಗಳು ಜಾತ್ರೆ ರೀತಿಯಲ್ಲಿ ಸೇರಿದ್ದರು.

ಇನ್ನು ಲಾಲ್ ಸಲಾಮ್ ಸಿನಿಮಾದಲ್ಲಿ ರಜನಿಕಾಂತ್ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದು ವಿಶೇಷ ಎಂದರೆ ಈ ಸಿನಿಮಾವನ್ನು ಸ್ವತಹ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸುಬಾಸ್ಕರನ್ (ಲೈಕಾ ಪ್ರೊಡಕ್ಷನ್ಸ್) ಬಂಡವಾಳ ಹೂಡಿದ್ದು ಸಿನಿಮಾದ ಮುಖ್ಯ ಪಾತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಅಭಿನಯ ಮಾಡುತ್ತಿದ್ದಾರೆ.

ಇನ್ನು ಸಿನಿಮಾಕ್ಕೆ AR ರೆಹಮಾನ್ ಅವರು ಸಂಗೀತ ನೀಡುತ್ತಿದ್ದಾರೆ. ಇದೇ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್​ ಆಗಬಹುದು ಎಂದು ಹೇಳಲಾಗುತ್ತಿದೆ. ಐಶ್ವರ್ಯ 2012ರಲ್ಲಿ ವೈ ರಾಜ ವೈ ಎನ್ನುವ ಸಿನಿಮಾ ನಿರ್ದೇಶನ(Direction) ಮಾಡಿ ಹೆಸರು ಪಡೆದಿದ್ದರು. ಈ ಸಿನಿಮಾದಲ್ಲಿ ತಮಿಳು ನಟ ಧನುಷ್ ಅಭಿನಯಿಸಿದ್ದರು.

 

ಇದನ್ನು ಓದಿ: Bengaluru: ಅಕ್ಕಿ ವಿತರಿಸೋ ಹೊತ್ತಲ್ಲೇ ನ್ಯಾಯ ಬೆಲೆ ಅಂಗಡಿ ಬಂದ್ ! 

You may also like

Leave a Comment