Gruha Lakshmi Scheme: ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ದೊರೆಯುತ್ತದೆ. ಸದ್ಯ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ. ಈ ಬಗ್ಗೆ ಸಿದ್ದರಾಮಯ್ಯ ಬಿಗ್ ಅಪ್ಡೇಟ್ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 2,000 ರೂ. ಸಿಗಲು ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯವಲ್ಲ.
ಆಧಾರ್ ಲಿಂಕ್ ಆಗಿರದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಬರುವ ಸುಮಾರು 22 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್
ಜೋಡಣೆ ಆಗಿಲ್ಲ ಎಂಬುದು ತಿಳಿದುಬಂದಿದೆ. ನಂತರ ಸಭೆಯಲ್ಲಿ ಚರ್ಚಿಸಿ ಆಧಾರ್ ಜೋಡಣೆಯಾಗದ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಸಿಗಲಿದೆ ಎಂಬ ಹೇಳಲಾಯಿತು.
ಇದನ್ನು ಓದಿ: Accident: ಬೆಳ್ಳಂಬೆಳಗ್ಗೆ ಭೀಕರ ದುರಂತ!! ಮನೆ ಮೇಲೆ ಬಿದ್ದ ಕೋಳಿ ಸಾಗಾಟದ ವಾಹನ-ಗಾಯಾಳುವನ್ನು ಹೊರತೆಗೆಯಲು ಹರಸಾಹಸ
