Diploma Common Entrance Test : ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023ನೇ ಸಾಲಿನ ಎರಡನೇ ವರ್ಷದ 3ನೇ ಸೆಮಿಸ್ಟರ್‌ನ ಎಂಜಿನಿಯರಿಂಗ್, ತಂತ್ರಜ್ಞಾನ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸೆ.10ರಂದು ಡಿಸಿಇಟಿ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಜು.31ರಿಂದ ಆ.13ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದವರಿಗೆ ಹಗಲು ಎಂಜಿನಿಯರಿಂಗ್ ಕಾಲೇಜ್ ಗಳಲ್ಲಿ ಪ್ರವೇಶಾವಕಾಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿವರಗಳಿಗಾಗಿ ವೆಬ್ ಸೈಟ್ http://kea.kar.nic.in ವೀಕ್ಷಿಸಬಹುದು.
