Mangalore: ರಾಜ್ಯದಲ್ಲಿ ಮೈಸೂರು- ಬೆಂಗಳೂರು-ಚೆನ್ನೈ ನಡುವೆ 2022ರಲ್ಲಿ ಮೊದಲ ವಂದೇ ಭಾರತ್ ರೈಲು ಆರಂಭವಾಯಿತು. ಬಳಿಕ 2023ರಲ್ಲಿ ಬೆಂಗಳೂರು-ಧಾರವಾಡ ವಯ ಹುಬ್ಬಳ್ಳಿ ನಡುವೆ ರೈಲು ಸೇವೆ ಆರಂಭಿಸಲಾಗಿದೆ. ಸದ್ಯ ಕರ್ನಾಟಕದಲ್ಲಿ ಇನ್ನೂ ಹಲವು ಮಾರ್ಗಗಳಲ್ಲಿ ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ.
ಬೆಂಗಳೂರು-ಹೈದರಾಬಾದ್, ಬೆಂಗಳೂರು-ಮಂಗಳೂರು, ಮೈಸೂರು-ಮಂಗಳೂರು, ಬೆಂಗಳೂರು-ಶಿವಮೊಗ್ಗ
ಬೆಂಗಳೂರು-ಬೆಳಗಾವಿ,
ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸಬೇಕು ಎಂದು ಇಲಾಖೆ ಮುಂದೆ ಬೇಡಿಕೆ ಇಡಲಾಗಿದೆ.
ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಬಿಜೆಪಿ ನಾರಾಯಣ ಕೊರಗಪ್ಪ ಪ್ರಶ್ನೆಗೆ ಉತ್ತರ ನೀಡುವಾಗ ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವ ಕುರಿತು ಮಾತನಾಡಿದ್ದಾರೆ.
ಸಚಿವರು ತಮ್ಮ ಉತ್ತರದಲ್ಲಿ “ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಈಗ 6 ಜೋಡಿ ರೈಲುಗಳು ಕಾರ್ಯಾಚರಣೆ ನಡೆಸುತ್ತಿವೆ. ದೇಶದ ಕಡೆಗಳಲ್ಲಿ 50 ವಂದೇ ಭಾರತ್ ರೈಲುಗಳು ಓಡುತ್ತಿವೆ. ಹೊಸ ಭಾರತ ವಿವಿಧ ರೈಲುಗಳು ಪ್ರಾರಂಭವಾಗುವ ನಿರಂತರ ಪ್ರಕ್ರಿಯೆ, ಕಾರ್ಯಾಚರಣೆಯ ಸಾಧ್ಯತೆ, ಪ್ರಯಾಣಿಕರ ದಟ್ಟಣೆಯಂತಹ ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.
ಕೇರಳದ ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಇದನ್ನು ಪಕ್ಕದ ಮಂಗಳೂರು ತನಕ ವಿಸ್ತರಣೆ ಮಾಡಬೇಕು ಎಂದು ಈ ಹಿಂದೆಯೇ ಇಲಾಖೆಗೆ ಮನವಿ ಮಾಡಲಾಗಿದೆ. ಆದರೆ ಈ ಬೇಡಿಕೆಗೆ ಒಪ್ಪಿಗೆ ಸಿಕ್ಕಿಲ್ಲ. ಇದರ ನಡುವೆ ಬೆಂಗಳೂರು- ಮಂಗಳೂರು, ಮೈಸೂರು- ಮಂಗಳೂರು ನಡುವೆ ಹೊಸ ವಂದೇ ಭಾರತ್ ಸಾಗಿಸಬೇಕು ಎಂದು ಬೇಡಿಕೆ ಇಡಲಾಗಿದೆ.
ಮಂಗಳೂರಿಗೆ (Mangalore)ವಂದೇ ಭಾರತ್ ರೈಲು ಓಡಿಸಲು ಪೂರಕವಾಗಿ ಹಲವು ಕಾಮಗಾರಿಗಳನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಕೈಗೊಳ್ಳಲಾಗಿದೆ. ಕಾಮಗಾರಿಗಳು ಪೂರ್ಣಗೊಳ್ಳಲು ಸುಮಾರು 6 ತಿಂಗಳ ಬೇಕು ಎಂದು ಅಂದಾಜಿಸಲಾಗಿದೆ. ಈಗಿರುವ ಪಿಟ್‌ಲೇನ್‌ನಲ್ಲಿಯೇ ಕೆಲ ಮಾರ್ಪಾಡು ಮಾಡಿ, ಇಲಿಟಿಕ್ ಲೈನ್ ಅಳವಡಿಕೆ ಮಾಡಿ, ವಂದೇ ಭಾರತ್ ಕೋಚ್ ಗಳ ನಿರ್ವಹಣೆಗಾಗಿ ವ್ಯವಸ್ಥೆ ಮಾಡಲಾಗುತ್ತಿದೆ.
ಮಂಗಳೂರು-ಮುಂಬೈ ನಡುವೆಯೂ ವಂದೇ ಭಾರತ್ ರೈಲು ಓಡಿಸಬೇಕು ಎಂದು ಪಶ್ಚಿಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್ ಸಹ ಮನವಿ ಮಾಡಿದ್ದಾರೆ. ಮಂಗಳೂರಿಗೆ ವಂದೇ ಭಾರತ್ ರೈಲು ಯಾವಾಗ ಬರುತ್ತದೆ? ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಅದಕ್ಕೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಸೆಕ್ಷನ್ ಇಂಜಿನಿಯರ್ ಪ್ರವೀಣ್ ಕುಮಾರ್ ಕೆಲವು ದಿನಗಳ ಹಿಂದೆ ಹೇಳಿದ್ದರು.
ಮತ್ತೊಂದು ಕಡೆ ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ಸಚಿವರಿಗೆ ಮನವಿ ಮಾಡಿದ್ದಾರೆ. ಗೋವಾ- ಮುಂಬೈ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸಿ ಉಡುಪಿ ಮತ್ತು ಸಿಂಗಾಪುರದ ಪ್ರಯಾಣಿಕರಿಗೆ ಪ್ರಯೋಜನಗಳಿವೆ. ಕಾರವಾರ- ತಿರುಪತಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ವಯ ಬೆಂಗಳೂರು ಹೊಸದಾಗಿ ಆರಂಭಿಸಿ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಉದ್ಯಮಗಳಿಗೆ ಹಾಗೂ ಮೀನುಗಾರರಿಗೆ, ಸಂಪರ್ಕಕ್ಕೆ ಪರಿಸರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ.
ಇದನ್ನು ಓದಿ: Aadhaar Card: ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯ ವಿಚಾರ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ !!
