Home » Uttar Pradesh: RSS ಕಚೇರಿ ಮೇಲೆ ಕಲ್ಲು ತೂರಾಟ, ದಾಂಧಲೆ; ಕಾರ್ಯಕರ್ತರಿಗೆ ಥಳಿತ !

Uttar Pradesh: RSS ಕಚೇರಿ ಮೇಲೆ ಕಲ್ಲು ತೂರಾಟ, ದಾಂಧಲೆ; ಕಾರ್ಯಕರ್ತರಿಗೆ ಥಳಿತ !

0 comments
Uttar Pradesh

Uttar Pradesh: ಆರ್‌ಎಸ್‌ಎಸ್ (Rashtriya Swayamsevak Sangh) ಕಚೇರಿಯ ಮೇಲೆ ಕಲ್ಲು ತೂರಾಟ, ದಾಂಧಲೆ ನಡೆಸಿ ಕಾರ್ಯಕರ್ತರಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶಹಜಹಾನ್‌ಪುರ ಜಿಲ್ಲೆಯ ಟೌನ್ ಹಾಲ್ ಪ್ರದೇಶದಲ್ಲಿ ನಡೆದಿದೆ.

ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಕಚೇರಿಯ​ ಮೆಟ್ಟಿಲ ಬಳಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ವ್ಯಕ್ತಿ ವಿನಾಕಾರಣ ಆರ್‌ಎಸ್‌ಎಸ್ ಕಾರ್ಯಕರ್ತನ ದಾಳಿ ನಡೆಸಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದು ವ್ಯಕ್ತಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಕೆಲವು ಜನ ಗುಂಪಾಗಿ ಬಂದು ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ.

ಅಲ್ಲದೆ, ಆರ್‌ಎಸ್‌ಎಸ್ (RSS) ಕಚೇರಿಯ ಗೋಡೆಯ ಮೇಲೆ ಮೂತ್ರ ವಿಸರ್ಜಿನೆ ಮಾಡಿ, ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಥಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಆದರೆ, ಈ ಮಧ್ಯೆ ಪೊಲೀಸರು ಕೂಡ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಬಗ್ಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಸದಸ್ಯರು, ಸ್ಥಳಕ್ಕಾಗಮಿಸಿದ ಪೊಲೀಸರು
ಪರಿಸ್ಥಿತಿಯನ್ನು ಹತೋಟಿಗೆ ತಂದ ನಂತರ ಆರ್‌ಎಸ್‌ಎಸ್ ಕಾರ್ಯಕರ್ತ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಅಲ್ಲದೆ, ದುಷ್ಕರ್ಮಿಗಳನ್ನು ಪರಾರಿಯಾಗಲು ಪೊಲೀಸರೇ ಎಡೆಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿರುವ ಹಿಂದೂ ಸಂಘಟನೆಗಳು ಸದರ್ ಪೊಲೀಸ್ ಠಾಣೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ ಉನ್ನತ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 

ಇದನ್ನು ಓದಿ: Jio Recharge Plan: ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್’ನ್ಯೂಸ್ ; ಬಂದಿದೆ ಹೊಸ ಆಫರ್ , 30 ದಿನಗಳ ಸಂಪೂರ್ಣ ಉಚಿತ ಸೇವೆ! 

You may also like