Tumkur: ಸರಕಾರಿ ಶಾಲೆಯೊಂದರ ವಿದ್ಯಾರ್ಥಿ ಹೋಬಳಿ ಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡಾ ಕೂಟದಲ್ಲಿ ಗೆದ್ದು ಬಹುಮಾನ ಸ್ವೀಕರಿಸುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು( Tumkur) ಜಿಲ್ಲೆಯ ತುಮಕೂರು ತಾಲೂಕಿನ ಚಿಕ್ಕತೊಟ್ಲು ಕೆರೆಗ್ರಾಮ ದಲ್ಲಿ ಗುರುವಾರ ಸಂಜೆ ನಡೆದಿದೆ.
ಕಲಬುರಗಿ ಮೂಲದ ವಿದ್ಯಾರ್ಥಿ ಭೀಮಾ ಶಂಕರ್ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು,ಆತ ತುಮಕೂರು ತಾಲೂಕಿನ ಬೆಳೆದರ ಗ್ರಾಮದ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು ಗುರುವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಿಲೇ ಆಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದ್ದರು.ಆದರೆ ಬಹುಮಾನ ಸ್ವೀಕರಿಸುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ವಿದ್ಯಾರ್ಥಿಯ ಮೃತ ದೇಹವನ್ನು ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಮ್ ಯಶಸ್ವಿ ಯೋಜನೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
