Home » Madikeri: ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು!

Madikeri: ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು!

1 comment
Madikeri

Madikeri: ಮಡಿಕೇರಿ (Madikeri)ನಗರದ ಅರಣ್ಯ ಇಲಾಖೆ ವಸತಿಗೃಹದಲ್ಲಿ ಬುಧವಾರ ಬೆಳಗ್ಗೆ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ (Suicide)ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮಡಿಕೇರಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Madikeri

ಮಂಡ್ಯ ಮೂಲದ ರಶ್ಮಿ(27) ಮೃತ ದುರ್ದೈವಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಮಡಿಕೇರಿಯಲ್ಲಿ ಅರಣ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ ರಶ್ಮಿ ಎಂಬುವವರು ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೆ (Death)ನೈಜ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Mangalore:ಸಿಟಿ ಬಸ್ ಅತಿ ವೇಗದ ಧಾವಂತ: ಬಸ್ ಬಾಗಿಲಿನಿಂದ ಕೆಳಕ್ಕೆ ಬಿದ್ದ ಕಂಡಕ್ಟರ್ ಸಾವು! ವೀಡಿಯೋ ವೈರಲ್

You may also like

Leave a Comment