Home » BPL ಕಾರ್ಡ್ ದಾರರಿಗೆ ಬಿಗ್ ನ್ಯೂಸ್! ರಿಯಾಯಿತಿ ದರದಲ್ಲಿ ಮನೆ, ನಿವೇಶನ ಹಂಚಿಕೆಗೆ ರಾಜ್ಯ ಸರ್ಕಾರ ಚಿಂತನೆ!

BPL ಕಾರ್ಡ್ ದಾರರಿಗೆ ಬಿಗ್ ನ್ಯೂಸ್! ರಿಯಾಯಿತಿ ದರದಲ್ಲಿ ಮನೆ, ನಿವೇಶನ ಹಂಚಿಕೆಗೆ ರಾಜ್ಯ ಸರ್ಕಾರ ಚಿಂತನೆ!

1 comment
BPL

BPL: ರೇಷನ್ ಕಾರ್ಡ್ (Ration Card)ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ (Ration Card)ವ್ಯವಸ್ಥೆ ಮಾಡಲಾಗಿದೆ. ಇದೀಗ,BPL ಕಾರ್ಡ್’ದಾರರಿಗೆ ಸಿಹಿಸುದ್ದಿಯೊಂದು ಪ್ರಕಟವಾಗಿದೆ.

ರಾಜಧಾನಿಯ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯವಿರುವ ಜಾಗದಲ್ಲಿ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಬಡಾವಣೆ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗುವ ಬಗ್ಗೆ ವಸತಿ ಸಚಿವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಧಕ ಬಾಧಕ ಅಧ್ಯಯನ ನಡೆಸಿ ವರದಿ ನೀಡಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಗೃಹಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡಿದ್ದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಲ್ ಕುಟುಂಬಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸುವ ಚಿಂತನೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರದಿಂದ(Government )ಜಮೀನು ಪಡೆದು ಬಡಾವಣೆ ಅಭಿವೃದ್ಧಿ ಮಾಡುವ ಇಲ್ಲವೇ ನಾವೇ ಮಾಲೀಕರ ಜತೆ 50:50 ಒಪ್ಪಂದ ದಡಿ ಬಡಾವಣೆ ಅಭಿವೃದ್ಧಿ ಪಡಿಸಿ ಬಡ ಕುಟುಂಬಗಳಿಗೆ ಸೂರು (House)ಕಲ್ಪಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಪ್ರಸ್ತಾವನೆ ತಯಾರಿಸಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಕುರಿತು ವಸತಿ ಸಚಿವರು ಮಾಹಿತಿ ನೀಡಿದ್ದಾರೆ.

ಜಮೀನು ಸ್ವಾಧೀನ ಸೇರಿದಂತೆ ನ್ಯಾಯಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥ ನಡೆಸಲು ಅದಾಲತ್ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಲು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರಾಜಧಾನಿಯ ಐದು ಕಡೆ ತಲಾ ಎರಡು ಸಾವಿರ ಎಕರೆ ಯಲ್ಲಿ ಟೌನ್ ಶಿಪ್ ಮತ್ತು ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಸಿ, ಈ ಸಲುವಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.ಟೌನ್ ಶಿಪ್ ಹಾಗೂ ವಿಲ್ಲಾ ಯೋಜನೆ ಕಡಿಮೆ ಅವಧಿಯಲ್ಲಿ ಸಂಪೂರ್ಣ ಮಾಡಬೇಕಾಗಿದೆ. ಹೀಗಾಗಿ ರೂಪು ರೇಷೆ ಹಾಕಿಕೊಂಡು ಪ್ರತ್ಯೇಕ ವಿಭಾಗ ರಚನೆ ಮಾಡಿ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: SSLC ವಿದ್ಯಾರ್ಥಿನಿ 12ನೆ ಮಹಡಿಯಿಂದ ಬಿದ್ದು ಸಾವು!ಕಾರಣ ಮೊಬೈಲ್ ನಲ್ಲಿ ಅಡಕವಾಗಿದೆಯೇ?

You may also like

Leave a Comment