12
Belthangady : ಬೆಳ್ತಂಗಡಿ( Belthangady)ತಾಲೂಕಿನ ಕಾಪಿನಡ್ಕದಲ್ಲಿ ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಮೃತ ಬೈಕ್ ಸವಾರ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು.ತಕ್ಷಣ ಬೈಕ್ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಗಣೇಶ ಚತುರ್ಥಿ : ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ, ಮಾರಾಟ ನಿಷೇಧ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
