Home » Actor Kishor: ಇದ್ಯಾವುದು ಹೊಸ ಸನಾತನ ಧರ್ಮ?- ಉದಯನಿಧಿ ಹೇಳಿಕೆಗೆ ಅಚ್ಚರಿ ಪ್ರತಿಕ್ರಿಯೆ ನೀಡಿದ ನಟ ಕಿಶೋರ್ ಕುಮಾರ್

Actor Kishor: ಇದ್ಯಾವುದು ಹೊಸ ಸನಾತನ ಧರ್ಮ?- ಉದಯನಿಧಿ ಹೇಳಿಕೆಗೆ ಅಚ್ಚರಿ ಪ್ರತಿಕ್ರಿಯೆ ನೀಡಿದ ನಟ ಕಿಶೋರ್ ಕುಮಾರ್

3 comments
Actor Kishor

Actor Kishor: ‘ಸನಾತನ ಧರ್ಮ (Sanatan dharm) ಎಂಬುದು ಮಲೇರಿಯಾ (maleria), ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಡಿಎಂಕೆ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ (M.K Stalin) ಅವರ ಪುತ್ರ ಉದಯನಿಧಿ ಸ್ಟಾಲಿನ್‌ (Udayanidhi Stalin) ಹೇಳಿದ್ದರು. ಈ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಬೆನ್ನಲ್ಲೇ ‘ಇದ್ಯಾವುದು ಹೊಸ ಸನಾತನ ಧರ್ಮ?’ ಎನ್ನುತ್ತಾ ಉದಯನಿಧಿ ಹೇಳಿಕೆಗೆ ನಟ ಕಿಶೋರ್ ಕುಮಾರ್ (Actor Kishor) ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಕಾಂತಾರದ ಪೋಲೀಸ್ ಹೇಳಿದ್ದೇನು ಗೊತ್ತಾ?

ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್ ಕುಮಾರ್ , ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದು ಹೇಳುವ ಮೂಲಕ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: A copper vessel: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುತ್ತೀರಾ ? ಇದು ಆರೋಗ್ಯಕ್ಕೆ ಒಳಿತೋ, ಕೆಡುಕೋ? ಇಲ್ಲಿದೆ ನೋಡಿ ಭಯಾನಕ ಸತ್ಯ !!

You may also like

Leave a Comment