KPSC AEO Recruitment 2023: ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ಲೋಕಸೇವಾ ಆಯೋಗವು(KPSC) ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ಅಸಿಸ್ಟಂಟ್ ಎಂಪ್ಲಾಯ್ಮೆಂಟ್ ಆಫೀಸರ್ ಹುದ್ದೆಗಳ ಭರ್ತಿಗೆ (KPSC AEO Recruitment 2023)ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
ನೇಮಕಾತಿ ವಿವರ
ಹುದ್ದೆಯ ಹೆಸರು : ಸಹಾಯಕ ಉದ್ಯೋಗಾಧಿಕಾರಿ
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ಹುದ್ದೆಗಳ ಸಂಖ್ಯೆ : 01 (ಕಲ್ಯಾಣ ಕರ್ನಾಟಕ ವೃಂದ)
ವೆಬ್‌ಸೈಟ್ ವಿಳಾಸ:https://www.kpsc.kar.nic.in/index.html
ಮೇಲೆ ತಿಳಿಸಿದ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 08-09-2023 ಆರಂಭಿಕ ದಿನವಾಗಿದ್ದು,07-10-2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹತಾ ಮಾನದಂಡಗಳು ಹೀಗಿವೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷವಾಗಿದ್ದು, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷವಾಗಿದೆ.ಅದೇ ರೀತಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷವಾಗಿದ್ದು, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷವಾಗಿದೆ. ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಕೆ ವಿಧಾನ ಹೀಗಿದೆ:
ಮೊದಲಿಗೆ,ಕೆಪಿಎಸ್‌ಸಿ ವೆಬ್‌ಸೈಟ್ ಗೆ ಭೇಟಿ ನೀಡಿ.ತೆರೆದ ಮುಖಪುಟದಲ್ಲಿ ‘Apply Online for Various Notifications’ ಎಂಬಲ್ಲಿ ಕ್ಲಿಕ್ ಮಾಡಿಕೊಳ್ಳಿ. ಈಗ ಮತ್ತೊಂದು ವೆಬ್‌ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸಹಾಯಕ ಉದ್ಯೋಗ ಅಧಿಕಾರಿ ಹುದ್ದೆಗೆ ಅರ್ಜಿ ಲಿಂಕ್ ಪ್ರತ್ಯೇಕವಾಗಿದ್ದು, ಅದನ್ನು ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಈಗಾಗಲೇ ಆಯೋಗದ ವೆಬ್‌ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್ ಟೈಪಿಸಿ ಲಾಗಿನ್ ಆಗಬಹುದು. ಅಗತ್ಯ ಮಾಹಿತಿ ಸರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲ ಸಲ KPSC ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದರೆ, ಸದರಿ ಪುಟದಲ್ಲಿ ‘New Registration’ ಲಿಂಕ್ ಮಾಡಿ, ಪ್ರೊಫೈಲ್ ಕ್ರಿಯೇಟ್ ಮಾಡಿಕೊಳ್ಳಿ. ಆ ಬಳಿಕ ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600 ಅರ್ಜಿ ಶುಲ್ಕವಿದ್ದು, ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕವಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50 ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇಲೆ ತಿಳಿಸಿದ ಹುದ್ದೆಗೆ ಪರೀಕ್ಷೆಗಳು ನಡೆಯಲಿದ್ದು, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ 02-12-2023 ರಂದು ನಡೆಯಲಿದೆ.ಅದೇ ರೀತಿ, ಸ್ಪರ್ಧಾತ್ಮಕ ಪರೀಕ್ಷೆ 03-12-2023ರಂದು ನಡೆಯಲಿದೆ.
ಇದನ್ನೂ ಓದಿ: ಫ್ರೀ ಬಸ್ಸಲ್ಲಿ ಓಡಾಡೋ ಮಹಿಳೆಯರಿಗೆ ಬಿಗ್ ಶಾಕ್- ಉಚಿತವಾಗಿ ಪ್ರಯಾಣಿಸಲು ನೀವಿನ್ನೂ ದುಡ್ಡು ಬಿಚ್ಚಲೇ ಬೇಕು!! ಏನಿದು ಹೊಸ ವಿಚಾರ
