Home » Prime Minister Hd Devegowda Bjp Jds Alliance Meeting : JDS-BJP ಮೈತ್ರಿ ಫಿಕ್ಸ್ !! ದೊಡ್ಡ ಗೌಡ್ರು-ಅಮಿತ್ ಶಾ ಮಾತುಕತೆ ಸಕ್ಸಸ್ !! ಮಂಡ್ಯ ಮಾತ್ರ ಜಸ್ಟ್ ಮಿಸ್ !

Prime Minister Hd Devegowda Bjp Jds Alliance Meeting : JDS-BJP ಮೈತ್ರಿ ಫಿಕ್ಸ್ !! ದೊಡ್ಡ ಗೌಡ್ರು-ಅಮಿತ್ ಶಾ ಮಾತುಕತೆ ಸಕ್ಸಸ್ !! ಮಂಡ್ಯ ಮಾತ್ರ ಜಸ್ಟ್ ಮಿಸ್ !

2 comments
Bjp Jds Alliance Meeting

Bjp Jds Alliance Meeting : ಸದ್ಯ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೂ (election) ಮುನ್ನ ಹೊಸದೊಂದು ತಿರುವು ಕಂಡುಬರುವ ಲಕ್ಷಣ ಕಂಡುಬರುತ್ತಿದೆ‌‌. ಹೌದು, ದೆಹಲಿಯಲ್ಲಿ (Delhi) ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅವರು ಸೆ.4ರಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ಮನೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ (Prime Minister Hd Devegowda Bjp Jds Alliance Meeting) ಮಾಡಿದ್ದಾರೆ.

ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿದ್ದು, ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ಕೂಡ ಹಾಜರಿದ್ದರು. ಈ ಸಂದರ್ಭದಲ್ಲಿ ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi) ಅವರಿಗೆ ಕರೆ ಮಾಡಿ ಮಾತನಾಡಿದ್ದು, ಮೈತ್ರಿ ಒಪ್ಪಂದದ ಬಗ್ಗೆ ಖಚಿತ ಮಾಡಿಕೊಂಡರು. ಈ ಮೈತ್ರಿ ಯಶಸ್ವಿಯಾಗಿದೆ.

ಜೊತೆಗೆ ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನು ಕೂಡ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆ 2024ರಲ್ಲಿ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ಮಾಡಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದ್ಯಕ್ಕೆ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ಸಮ್ಮತಿಸಿದ್ದಾರೆ. ಆದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳೋಣ ಎಂದಿದ್ದಾರೆ.

ಆದರೆ, ಈ ವಿಚಾರವನ್ನು ಮಾಜಿ ಪ್ರಧಾನಿ ದೇವೇಗೌಡರು ಎಲ್ಲಿಯೂ ಹಂಚಿಕೊಳ್ಳದೇ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್‌ ನಾಯಕರ ಸಭೆಯನ್ನು ಕರೆದು, ಈ ವಿಚಾರವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ, ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: IAS ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಮ್ಮೆ ಸಂಕಷ್ಟ- ಬಟಾ ಬಯಲಾಯ್ತು ಮತ್ತೊಂದು ಸತ್ಯ!!

You may also like

Leave a Comment