Home » Prajwal Revanna: ಸಂಸದ ಸ್ಥಾನ ರದ್ಧು ಬಳಿಕವೂ ಪ್ರಜ್ವಲ್ ರೇವಣ್ಣನಿಗೆ ಮತ್ತೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್ !! ಅರೆ.. ಮತ್ತೆ ಗೌಡರ ಮೊಮ್ಮಗ ಮಾಡಿದ್ದೇನು?

Prajwal Revanna: ಸಂಸದ ಸ್ಥಾನ ರದ್ಧು ಬಳಿಕವೂ ಪ್ರಜ್ವಲ್ ರೇವಣ್ಣನಿಗೆ ಮತ್ತೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್ !! ಅರೆ.. ಮತ್ತೆ ಗೌಡರ ಮೊಮ್ಮಗ ಮಾಡಿದ್ದೇನು?

1 comment
Prajwal Revanna

Prajwal revanna: ಇತ್ತೀಚೆಗಷ್ಟೆ ಹಾಸನದ ಜೆಡಿಎಸ್​(JDS) ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್​ ಸದಸ್ಯತ್ವದವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೀಗ ಈ ಬೆನ್ನಲ್ಲೇ ಹೈಕೋರ್ಟ್ ಪ್ರಜ್ವಲ್ ರೇವಣ್ಣನಿಗೆ(Prajwal revanna) ಮತ್ತೆ ಬಿಗ್ ಶಾಕ್ ನೀಡಿದೆ.

ಹೌದು, ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಿಂದ ಶಾಕ್‌ ಮೇಲೆ ಶಾಕ್‌ ನೀಡಲಾಗುತ್ತಿದೆ. ಸಂಸದ ಸ್ಥಾನದಿಂದ ಅನರ್ಹತೆ ತಡೆಗೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಹೈಕೋರ್ಟ್ ವಜಾಗೊಳಿಸಿದ್ದು ಪ್ರಜ್ವಲ್ ರೇವಣ್ಣನಿಗೆ ನಿರಾಸೆಯಾಗಿದೆ. ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅಂದಹಾಗೆ ಸಂಸದ ಸ್ಥಾನದಿಂದ ಅಸಿಂಧುಗೊಂಡ ಪ್ರಜ್ವಲ್‌ ರೇವಣ್ಣ ಅವರು, ಹೈಕೋರ್ಟ್‌ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸಂಸದ ಸ್ಥಾನದ ಅಮಾನತ್ತು ಆದೇಶವನ್ನು 30 ದಿನಗಳ ಕಾಲ ಅಮಾನತ್ತಿನಲ್ಲಿ ಇಟ್ಟರೆ, ಈ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ‌ ಉದಯ್ ಹೊಳ್ಳ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದರು. ನಿನ್ನೆ ಕೆ.ನಟರಾಜನ್ ಅವರು ಆ ತೀರ್ಪು ಅನ್ನು ಪ್ರಕಟಿಸಿದ್ದಾರೆ. ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್‌ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಜ್ವಲ್‌ ರೇವಣ್ಣ ಲೋಕಸಭೆಗೆ ಹಾಜರಾದ ಅತ್ಯಂತ ಕಿರಿಯ ಸಂಸದರಲ್ಲಿ 3ನೇ ವ್ಯಕ್ತಿಯಾಗಿದ್ದರು. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಕೆ ಮಾಡಲಾದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಪ್ರಕರಣದ ವಿಚಾರಣೆ ಮಾಡಿದ ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣ ಸುಳ್ಳು ಮಾಹಿತಿ ಕೊಟ್ಟಿದ್ದಾರೆಂಬ ಆಧಾರದ ಮೇಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: Congress: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಗೆ ಡಬಲ್ ಶಾಕ್ – ಚುನಾವಣೆ ಹೊತ್ತಲ್ಲೇ ಪಕ್ಷ ತೊರೆದ ಇಬ್ಬರು ಪ್ರಭಾವಿ ನಾಯಕರು !!

You may also like

Leave a Comment