BJP-JDS : 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಭರ್ಜರಿ ಜೋರಾಗಿದೆ. ಲೋಕಸಮರದಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್(Congress) ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್(BJP-JDS) ಮುಂದಾಗಿವೆ. ಎಲ್ಲರೂ ನಿರೀಕ್ಷಿಸಿದಂತೆ ಈ ಎರಡೂ ಪಕ್ಷಗಳು ಮೈತ್ರಿಗೆ ಸನ್ನಧವಾಗಿದ್ದು, ಕ್ಷೇತ್ರ ಹಂಚಿಕೆ ಕೂಡ ನಡೆದಿದೆ ಎನ್ನಲಾಗಿದೆ. ಆದರೀಗ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮೈತ್ರಿ ಕುರಿತು ಇದ್ದಕ್ಕಿದ್ದಂತೆ ಯೂಟರ್ನ್ ಹೊಡೆದು ಭಾರೀ ಕುತೂಹಲ ಕೆರಳಿಸಿದ್ದಾರೆ.
ಹೌದು, 2024 ರ ಲೋಕಸಭಾ ಚುನಾವಣೆಗೆ(Parliament election)ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲಾಗುವುದು. ಆ ಪಕ್ಷಕ್ಕೆ ನಾಲ್ಕು ಸೀಟುಗಳನ್ನು ಬಿಟ್ಟುಕೊಡಲು ತೀರ್ಮಾನ ಆಗಿದೆ. ಎಂಬ ಹೇಳಿಕೆ ನೀಡಿದ್ದ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಇದೀಗ ಮತ್ತೆ ಯೂಟರ್ನ್ ಹೊಡೆದಿದ್ದಾರೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವವರು ಸುದ್ದಿಗಾರರ ಜೊತೆ ಮಾತನಾಡಿ ಬಿಜೆಪಿ ಜೆಡಿಎಸ್ ಮೈತ್ರಿ ಸಂಬಂಧ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು ಎಂಬ ಹೇಳಿಕೆಯನ್ನು ಕಳೆದ ವಾರ ಕೊಟ್ಟಿದೆ ಆದರೆ ಅದು ವಾಸ್ತವಿಕ ಸಂಗತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಚರ್ಚೆ ಬಳಿಕ ವಾಸ್ತವಿಕ ಸಂಗತಿ ಗೊತ್ತಾಗಲಿದೆ ಬಿಜೆಪಿ ಜೆಡಿಎಸ್ ಮೈತ್ರಿ ಆದರೆ ಅನುಕೂಲವಾಗದೆ ಮೈತ್ರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ನೀಡಿರುವ ಹೇಳಿಕೆ ಭಾರೀ ಕುತೂಹಲ ಕೆರಳಿಸಿದೆ.
ಇನ್ನು ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮಗೊಂಡಿದೆ ಎಂಬ ಹೇಳಿಕೆಗಳನ್ನು ನೀಡಿದಂತೆ ವರಿಷ್ಠರು ತಾಕಿತು ಮಾಡಿರುವುದು ಯಡಿಯೂರಪ್ಪ ಯೂಟರ್ನ್ ಹೊಡೆಯಲು ಕಾರಣ ಎಂಬ ಚರ್ಚೆ ಪಕ್ಷದ ವಲಯದಲ್ಲಿ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿಯವರು ಉತ್ಸುಕರಾಗಿದ್ದಾರೆ. ಮೈತ್ರಿ ಮಾತು ಕಥೆಗಳು ಅಂತಿಮ ಘಟ್ಟಕ್ಕೆ ತಲುಪುವ ಮುನ್ನವೇ ಬಹಿರಂಗವಾಗಿರುವುದು ಪಕ್ಷದ ವರಿಷ್ಠರ ಕಸಿಬೇಸಿಗೆ ಕಾರಣವಾಗಿದೆ.
ಇದನ್ನೂ ಓದಿ: Chaitra kundapura: ಚೈತ್ರಾ ಕುಂದಾಪುರ ಪ್ರಕರಣ- ಬಿಜೆಪಿಗೆ ಕಾಂಗ್ರೆಸ್ ಹೇಳಿದ್ದೇನು ಗೊತ್ತಾ?
