Home » Bengalore accident: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ- ಮಂಗಳೂರು ಯುವಕ ದಾರುಣ ಸಾವು

Bengalore accident: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ- ಮಂಗಳೂರು ಯುವಕ ದಾರುಣ ಸಾವು

1 comment
Bengalore accident

Bengalore accident: ಬೆಂಗಳೂರಿನಲ್ಲಿ(Bengalore accident) ಭೀಕರವಾದ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಮಂಗಳೂರಿನ ಯುವಕ ದಾರುಣ ಅಂತ್ಯ ಕಂಡಿದ್ದಾನೆ.

ಹೌದು, ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರು ನಗರದ ಕುದ್ರೋಳಿಯ ನಾಹಿದ್ ಸಫಾನ್ (28) ಮೃತಪಟ್ಟ ಯುವಕನಾಗಿದ್ದಾನೆ. ಅಂದಹಾಗೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಫಾನ್ ಗುರುವಾರ ಅಪರಾಹ್ನ ಯಲಹಂಕ ಬಳಿ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದ ನಾಹಿದ್ ಸಫಾನ್ ತಂದೆ ಮತ್ತು ತಾಯಿ ಹಾಗೂ ಅಣ್ಣ, ಅಕ್ಕ, ಪತ್ನಿಯನ್ನು ಅಗಲಿದ್ದಾರೆ.

ಅಪಘಾತ ಆದದ್ದು ಹೇಗೆ?
ಯಲಹಂಕದ ನೆಹರೂ ನಗರದಲ್ಲಿ ವಾಸವಾಗಿದ್ದ ಇವರು ತನ್ನ ಸ್ಕೂಟರ್‌ನಲ್ಲಿ ಯಲಹಂಕದಿಂದ ಬೆಂಗಳೂರು ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಯಲಹಂಕ ಬಿಬಿ ರಸ್ತೆಯ ಏರೋ ಡ್ರಂ ಬಳಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: Preetam gouda: BJP-JDS ಮೈತ್ರಿ ಎಫೆಕ್ಟ್- ಬಿಜೆಪಿಯ ಮೊದಲ ವಿಕೆಟ್ ಪತನ ?! ಪ್ರಬಲ ನಾಯಕನ ಹೇಳಿಕೆಗೆ ನಲುಗಿದ ಕಮಲ

You may also like

Leave a Comment