Home » Chaitra Kundapura Fraud Case: ಚೈತ್ರಾ ಕುಂದಾಪುರ ಪ್ರಕರಣ- ತನಿಖೆ ಕುರಿತು ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್

Chaitra Kundapura Fraud Case: ಚೈತ್ರಾ ಕುಂದಾಪುರ ಪ್ರಕರಣ- ತನಿಖೆ ಕುರಿತು ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್

1 comment
Chaitra Kundapura Fraud Case

Chaitra Kundapura Fraud Case: ಹಿಂದೂ ಸಂಘಟನೆಯ ನಾಯಕಿ ಚೈತ್ರಾ ಕುಂದಾಪುರ Chaitra Kundapuraಅವರ ಬಂಧನದ ಬಳಿಕ ಅನೇಕ ರೋಚಕ ಮಾಹಿತಿಗಳು ಹೊರ ಬೀಳುತ್ತಿದೆ. ಚೈತ್ರಾ ಕುಂದಾಪುರ ವಂಚನೆ(Chaitra Kundapura Fraud Case)ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೀಗ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಆಸಕ್ತಿ ತೋರುವಂತೆ ಕಾಣುತ್ತಿದೆ.

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿರುವ ಆರೋಪದ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು,ಇದೀಗ ಮತ್ತೊಂದು ವಂಚನೆ ಪ್ರಕರಣ ಚೈತ್ರಾ ಬೆನ್ನೇರಿದೆ. ನನಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳು, ಶಾಸಕರ ನಿಕಟ ಸಂಪರ್ಕವಿದೆ ಎಂದು ಚೈತ್ರಾ ಕುಂದಾಪುರ  ಸುದಿನ ಎಂಬವರಿಗೆ ನಂಬಿಸಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.ವೃತ್ತಿಯಲ್ಲಿ ಮೀನುಗಾರನಾಗಿರುವ ಬ್ರಹ್ಮಾವರ ನಿವಾಸಿ ಸುದೀನ ಎಂಬುವರು ಚೈತ್ರಾ ವಿರುದ್ಧ ದೂರು ನೀಡಿದ್ದು, ಬಟ್ಟೆ ಅಂಗಡಿ ಹಾಕಿಸಿಕೊಡುತ್ತೇನೆ ಎಂದು ಚೈತ್ರಾ ಕುಂದಾಪುರ ಐದು ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ಈ ವಂಚನೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಕೂಡ ಬಿಡುವುದಿಲ್ಲ ಎಂದು ಹೇಳಿದೆ.

 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಚೈತ್ರ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಟ್ವೀಟ್ ಮಾಡಿದೆ. ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆಸಿ ವಂಚನೆ ಮಾಡಿದೆಲ್ಲವು ಸಿಟಿ ರವಿ ಮತ್ತು ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ಗೊತ್ತಿತ್ತು ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿ ಅಕ್ರಮವೊಂದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇಕೆ ಎಂದು ಪ್ರಶ್ನೆ ಮಾಡಿರುವ ಕಾಂಗ್ರೆಸ್, ಬಿಜೆಪಿ ನಿಜಕ್ಕೂ ಹಣ ವಸೂಲಿ ಮಾಡಿ ಟಿಕೆಟ್ ನೀಡುವ ಕೆಲಸ ಮಾಡಿತ್ತೇ? ಎಂದು ಕೇಳಿದ್ದು, ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ  ಕೂಡ ಬಿಡುವ ಪ್ರಶ್ನೆಯೇ ಇಲ್ಲ. ಸೂಕ್ತ ಸಾಕ್ಷ್ಯಧಾರವಿದ್ದರೆ ಬಿಜೆಪಿಯ ದಂಡನಾಯಕರನ್ನೂ ಬಂಧಿಸಿ ವಿಚಾರಣೆ ನಡೆಸಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟ ಪಡಿಸಿದೆ.

ಇದನ್ನೂ ಓದಿ: Chaitra kundapura: ನೊರೆ ಬಂದ ಬಾಯಲ್ಲೀಗ ನಗು- ಹಾಲಶ್ರಿ ಅರೆಸ್ಟ್ ಆಗುತ್ತಿದ್ದಂತೆ ಚೈತ್ರಾ ಕುಂದಾಪುರ ಮಾಡಿದ್ದೇನು?

You may also like

Leave a Comment