Bike taxi: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾದ ಬಳಿಕ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಭಾರಿ ನಷ್ಟ ಉಂಟಾಗುತ್ತಿದೆ. ಸರ್ಕಾರಿ ಬಸ್ ಗಳು ಫ್ರೀ ಟಿಕೆಟ್ ನೀಡುವುದರಿಂದ ಮಹಿಳೆಯರೆಲ್ದರೂ KSRTC ಬಸ್ ಮೊರೆ ಹೋಗಿದ್ದಾರೆ. ಹೀಗಾಗಿ ಖಾಸಗಿ ವಾಹನಗಳ ಮಾಲಿಕರು ಕಂಗಾಲಾಗಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ವಾಹನ ಸಂಘಟನೆಗಳು ಈಗಾಗಲೇ ಬೆಂಗಳೂರು ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಬಂದ್ ಮಾಡವುದರೊಂದಿಗೆ ಸರ್ಕಾರಕ್ಕೆ ಹಲವು ಬೇಡಿಕೆ ಇಟ್ಟು ಈಡೇರಿಸಲು ಆಗ್ರಹಿಸಿದ್ದಾರೆ. ಈ ವೇಳೆ ಸಾರಿಗೆ ಸಚಿವರ ರಮಾಲಿಂಗ ರೆಡ್ಡಿಯವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆಯನ್ನು ಕೂಡ ನೀಡಿದ್ದಾರೆ. ಆದರೆ ಇದೆಲ್ಲದರ ಬೆನ್ನಲ್ಲೇ ಈ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಆಘಾತ ಎದುರಾಗಿದ್ದು ಅವರ ದುಡಿಮೆಗೆ ಕತ್ತರಿ ಬೀಳುವುದು ಪಕ್ಕವಾಗಿದೆ.
ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಕ್ತಿ ಯೋಜನೆ ಆರಂಭವಾದ ಮೇಲೆ ಖಾಸಗಿ ವಾಹನ ಸಂಸ್ಥೆಗಳು ನಷ್ಟದಲ್ಲಿವೆ ಎಂಬ ಕೂಗು ಕೇಳಿಬರುತ್ತಿವೆ. ಅಷ್ಟೇ ಅಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಷೇಧಿಸುವಂತೆ ಆಟೋ, ಟ್ಯಾಕ್ಸಿ ಮಾಲಿಕರು ಮತ್ತು ಚಾಲಕರ ಸಂಘ ಸರ್ಕಾರವನ್ನು ಆಗ್ರಹಿಸುತ್ತಿರುವ ನಡುವೆಯೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವಾ ಸಂಸ್ಥೆಯಾದ ಓಲಾ ಈಗ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನೂ ಆರಂಭಿಸಿದೆ. ಇದರಿಂದ ರಾಪಿಡ್, ಉಬರ್ ಬೈಕ್ ಟ್ಯಾಕ್ಸಿ( Bike taxi)ಸಾಲಿಗೆ ಇದೀಗ ಓಲಾ ಕೂಡ ಸೇರ್ಪಡೆಗೊಂಡಿದೆ. ಇದು ಬೈಕ್ ಟ್ಯಾಕ್ಸಿಯಿಂದ ಆದಾಯ ನಷ್ಟದ ಆತಂಕದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರು ಮತ್ತು ಮಾಲಿಕರನ್ನು ಮತ್ತಷ್ಟು ಕಂಗೆಡಿಸಿದೆ.

ಇನ್ನು ಓಲಾ ಸಿಇಒ ಭವಿಷ್ ಅಗರ್ವಾಲ್ ಇತ್ತೀಚೆಗಷ್ಟೆ ಬೈಕ್ ಟ್ಯಾಕ್ಸಿ ಆರಂಭಿಸುತ್ತಿರುವ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಓಲಾ ಆ್ಯಪ್‌ನಲ್ಲಿ ಕಾರು, ಆಟೋ ಟ್ಯಾಕ್ಸಿ ಮಾದರಿಯಲ್ಲಿ ಗ್ರಾಹಕರು ಬೈಕ್ ಟ್ಯಾಕ್ಸಿ ಸೇವೆಯನ್ನು ಪಡೆಯಬಹುದಾಗಿದೆ. ಓಲಾ ಎಸ್1 ಎಲೆಕ್ಟ್ರಿಕ್ ಬೈಕ್‌ಗಳ ಮೂಲಕ ಬೈಕ್ ಟ್ಯಾಕ್ಸಿ ಆರಂಭಿಸಿದ್ದು, 5 ಕಿ.ಮೀ. ವರೆಗೆ ₹25 ಮತ್ತು 10 ಕಿ.ಮೀ. ವರೆಗೆ ₹50 ದರ ನಿಗದಿಪಡಿಸಿದೆ. ಓಲಾದಿಂದ ಬೈಕ್ ಟ್ಯಾಕ್ಸಿ ಸೇವೆ ಆರಂಭಿಸುವ ಪ್ರಯತ್ನ 2016ರಲ್ಲೇ ನಡೆದಿತ್ತಾದರೂ ವಿವಿಧ ಕಾರಣಗಳಿಂದ ಯಶಸ್ವಿಯಾಗಿರಲಿಲ್ಲ. ಇದೀಗ ಬೆಂಗಳೂರಿನಲ್ಲಿ ಈ ಸೇವೆ ಆರಂಭಿಸಿದ್ದು, ದೇಶದ ಪ್ರಮುಖ ನಗರಗಳಲ್ಲಿ ವಿಸ್ತರಿಸುವ ಗುರಿ ಹೊಂದಿರುವುದಾಗಿ ಅಗರ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ: H D Kumarswamy: ಬಿಜೆಪಿ ಕೂಟ ಸೇರಿದ ಬೆನ್ನಲ್ಲೇ ಅಮಿತ್ ಶಾಗೆ ಖಡಕ್ ಸೂಚನೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ
