Bengalore : ಕೆಲವು ತಿಂಗಳುಗಳ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತೆ ಬೃಹತ್ ಬೆಂಗಳೂರು(Bengalore) ಮಹಾ ನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಒಂದು ವೇಳೆ ಬಿಬಿಎಂಪಿಯ ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದರೆ ಬೆಂಗಳೂರಿನ 25 ಲಕ್ಷ ಮಂದಿ ಆಸ್ತಿ ಮಾಲೀಕರ ಜೇಬಿಗೆ ಕತ್ತರಿ ಬೀಳಲಿದ್ದು, ಆಸ್ತಿ ತೆರಿಗೆ ಪ್ರಮಾಣದಲ್ಲಿ ಏರಿಕೆ ಆಗುತ್ತಿತ್ತು. ಇದು ಬೆಂಗಳೂರಿಗರ ನಿದ್ದೆ ಕೆಡಿಸಿತು. ಆದರೀಗ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ (D K Shivkumar)ಸಖತ್ ಗುಡ್ ನ್ಯೂಸ್ ಕೊಟ್ಟಿದ್ದು, ಆಸ್ತಿ ತೆರಿಗೆ ಹೆಚ್ಚಿಸುವುದಿಲ್ಲ ಎಂದಿದ್ದಾರೆ.
ಹೌದು, ನಮ್ಮ ಸರ್ಕಾರವು ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಮುಂದಾಗಿದೆ. ಇದಕ್ಕೆ ಸಾಕಷ್ಟು ಹಣ ವ್ಯಯವಾಗುತ್ತದೆ. ಆದರೂ ನಾವು ಟ್ಯಾಕ್ಸ್ ಹೆಚ್ಚಳ ಮಾಡಲ್ಲ. ಆದರೆ, ಬೆಂಗಳೂರಿನ ಎಲ್ಲಾ ಸ್ವತ್ತುಗಳನ್ನ ಮರು ಸಮೀಕ್ಷೆ ಮಾಡಿಸುತ್ತೇವೆ. ಎಲ್ಲಿ ತೆರಿಗೆ ಸೋರಿಕೆ ಆಗುತ್ತಿದೆಯೋ ಅದನ್ನು ಸರಿಪಡಿಸಿ ಡಿಜಿಟಲೀಕರಣ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಅಂದಹಾಗೆ ಕೆಲವು ದಿನಗಳ ಹಿಂದಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿ ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ ಶಿವಕುಮಾರ್ ಅವರು, ಬಿಬಿಎಂಪಿಯ ತೆರಿಗೆ ಸಂಗ್ರಹ ನನಗೆ ತೃಪ್ತಿ ನೀಡಿಲ್ಲ. ಸಂಗ್ರಹವಾಗುತ್ತಿರುವುದು ಕೇವಲ 3 ಸಾವಿರ ಕೋಟಿ ರೂ.ಗಳು ಮಾತ್ರ. ಇಷ್ಟು ಹಣದಲ್ಲಿ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಪದೇಪದೇ ಹಣ ನೀಡಲಾಗುವುದಿಲ್ಲ. ಅದಕ್ಕಾಗಿ ಪರಿಣಾಮಕಾರಿ ತೆರಿಗೆ ಸಂಗ್ರಹಕ್ಕೆ ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು.
ಆದರೀಗ ಬ್ರ್ಯಾಂಡ್ ಬೆಂಗಳೂರು ಸಮ್ಮೇಳನ ಕಾರ್ಯಕ್ರಮ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ಯಾಕ್ಸ್ ಹೆಚ್ಚಳ ಮಾಡಲ್ಲ ಎಂದಿದ್ದಾರೆ. ಅಲ್ಲದೆ ಬೆಂಗಳೂರು ಯಾವ ದಿಟ್ಟಿನಲ್ಲಿ ಬದಲಾವಣೆ ಆಗಬೇಕು ಅನ್ನೋ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 1.40 ಕೋಟಿ ಜನ ವಾಸ ಮಾಡುತ್ತಿದ್ದಾರೆ. ಪ್ರತಿವರ್ಷ 3 ಲಕ್ಷ ಹೊಸ ಕುಟುಂಬಗಳು ಸೇರ್ಪಡೆ ಆಗ್ತಿವೆ. ಕುಡಿಯುವ ನೀರಿನ ಬೇಡಿಕೆ ಕೂಡ ಜಾಸ್ತಿ ಆಗ್ತಾ ಇದೆ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ತಜ್ಞರಿಂದ ಸಲಹೆ ಪಡೆದುಕೊಂಡಿದ್ದೇವೆ. ಎಲ್ಲಾ ವಲಯಗಳ ಎಂಟು ತಂಡಗಳನ್ನು ಮಾಡಿದ್ದೇವೆ. ಅವರಿಂದ ವರದಿ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನು ಓದಿ: Chitradurga: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ರಾರಾಜಿಸಿದ ನಾಥೂರಾಮ್ ಗೋಡ್ಸೆ ಭಾವಚಿತ್ರ
